ETV Bharat / state

ಲಂಚ ಸ್ವೀಕರಿಸಿದ ಆರೋಪ ಸಾಬೀತು: ಗ್ರಾಮಕರಣಿಕನಿಗೆ ನಾಲ್ಕು ವರ್ಷ ಸಜೆ, 70 ಸಾವಿರ ರೂ ದಂಡ..

ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗಾಗಿ ಲಂಚ ಸ್ವೀಕರಿಸಿದ್ದ ಗ್ರಾಮಕರಣಿಕ - ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ - ಅಪರಾಧಿಗೆ ಶಿಕ್ಷೆ ವಿಧಿಸಿದ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

District and Sessions Court Mangalore
ಲಂಚ ಸ್ವೀಕರಿಸಿದ ಆರೋಪ ಸಾಬೀತು: ಗ್ರಾಮಕರಣಿಕನಿಗೆ ನಾಲ್ಕು ವರ್ಷ ಸಜೆ, 70 ಸಾವಿರ ದಂಡ..
author img

By

Published : Mar 3, 2023, 3:30 PM IST

ಮಂಗಳೂರು: ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ, ಗ್ರಾಮಕರಣಿಕನ ಮೇಲಿನ ಆರೋಪ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ನಾಲ್ಕು ವರ್ಷಗಳ ಸಾದಾ ಸಜೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಸುಳ್ಯದ ಮಂಡೆಕೋಲು ಗ್ರಾಮದ ಗ್ರಾಮಕರಣಿಕ ಎಸ್.ಮಹೇಶ್ ಶಿಕ್ಷೆಗೊಳಗಾದ ಅಪರಾಧಿ. ಎಸ್.ಮಹೇಶ್ ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ, ಮಂಡೆಕೋಲು ನಿವಾಸಿ ಗೋಪಾಲಕೃಷ್ಣ ಅವರಿಂದ 60 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು. 2016ರ ಜೂ.7 ರಂದು 45,000 ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಮಹೇಶ್ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದರು. ಈ ಸಂಬಂಧ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ದಿನಕರ ಶೆಟ್ಟಿ ಕೈಗೊಂಡಿದ್ದರು, ಬಳಿಕ ಮಂಗಳೂರು ಪೊಲೀಸ್ ನಿರೀಕ್ಷಕ ಯೋಗೀಶ್ ಕುಮಾರ್ ತನಿಖೆ ಮುಂದುವರಿಸಿ ಆರೋಪಿ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ವಿಚಾರಣೆ ನಡೆಸಿ ಶುಕ್ರವಾರ ಅಂತಿಮ ತೀರ್ಪು ನೀಡಿದ್ದಾರೆ. ಈ ತೀರ್ಪಿನಲ್ಲಿ ಗ್ರಾಮಕರಣಿಕ ಎಸ್.ಮಹೇಶ್ ಮೇಲಿನ ಆರೋಪ ಸಾಬೀತಾಗಿದ್ದು, ಆತನಿಗೆ ನಾಲ್ಕು ವರ್ಷಗಳ ಸಾದಾ ಸಜೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 8 ತಿಂಗಳ ಕಾಲ ಸಾದಾ ಸಜೆ ವಿಧಿಸಿ ಆದೇಶಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಮಂಗಳೂರು ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾದ ರವೀಂದ್ರ ಮುನ್ನಿಪಾಡಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಇದನ್ನೂ ಓದಿ:ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದಿದ್ದ ಪಂಚಾಯತ್ ರಾಜ್ ಅಧಿಕಾರಿ: ಕಳೆದ ತಿಂಗಳು ಮಂಗಳೂರಿನಲ್ಲಿ ಕಾಮಗಾರಿ ಬಿಲ್ ಮಂಜೂರಾತಿಗಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಂಚಾಯತ್ ರಾಜ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​ನ ಪಂಚಾಯತ್ ರಾಜ್, ತಾಂತ್ರಿಕ ವಿಭಾಗದ ಸಹಾಯಕ ಇಂಜಿನಿಯರ್​ ಕುಮಾರಿ ರೂಪಾ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಡಾರ್ಮಿಟರ್ ಹಾಲ್ ರಚನೆಯ ಟೆಂಡರ್ ಕಾಮಗಾರಿಯ ಬಿಲ್ ಮಂಜೂರಾತಿಗಾಗಿ ಕುಮಾರಿ ರೂಪಾ ಲಂಚ ಸ್ವೀಕರಿಸುತ್ತಿದ್ದರು. 10 ಸಾವಿರ ರೂಪಾಯಿ ಲಂಚಕ್ಕೆ ಕುಮಾರಿ ರೂಪಾ ಬೇಡಿಕೆಯಿಟ್ಟಿದ್ದು, 8 ಸಾವಿರ ರೂಪಾಯಿಯನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಹಣವನ್ನು ವಶಕ್ಕೆ ಪಡೆದು ಅಧಿಕಾರಿಯನ್ನು ಬಂಧಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.