ಮಂಗಳೂರು: ಏರ್ಪೋರ್ಟ್ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ 'ಗಾರ್ಡ್ ಆಫ್ ಆನರ್'( ಗೌರವ ವಂದನೆ) ಕೊಡುವ ಅವಶ್ಯಕತೆ ಇಲ್ಲ. ಅಲ್ಲದೆ ಪ್ರತೀ ಬಾರಿ ಜಿಲ್ಲೆಗೆ ನಾನು ಭೇಟಿ ಕೊಟ್ಟಾಗಲೂ ಕೊಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ನಾಳೆ ಬೆಂಗಳೂರಿಗೆ ಹೋದ ತಕ್ಷಣ ಆದೇಶ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಇತ್ತೀಚೆಗಷ್ಟೇ ಸುತ್ತೋಲೆ ಹೊರಡಿಸಿದೆ. ಅದರ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಹೇಳಲಾಗಿದೆ.
ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ಈಗಾಗಲೇ ತಿಳಿಸಲಾಗಿದೆ.
ಇದನ್ನೂ ಓದಿ:ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ತುರಾಯಿ ನಿಷೇಧ: ಪುಷ್ಪ ಬೆಳೆಗಾರರಿಂದ ಪ್ರತಿಭಟನೆ