ಮಂಗಳೂರು: ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವ 'ಅಕ್ಷರ ಸಂತ' ಹರೇಕಳ ಹಾಜಬ್ಬರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರು ಸನ್ಮಾನ ಮಾಡಿ ಗೌರವಿಸಿದ್ದಾರೆ.
ಜಿಲ್ಲೆಯ ಮರವೂರಿನಲ್ಲಿರುವ ಜುಮ್ಮಾ ಮಸೀದಿಯ ಆವರಣದಲ್ಲಿ ದೇವೇಗೌಡರು ಹಾಜಬ್ಬರನ್ನು ಸನ್ಮಾನಿಸಿದ್ದಾರೆ.
ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಕಾರಣಕ್ಕೆ ವ್ಯಾಪಾರಿ ಹರೇಕಳ ಹಾಜಬ್ಬರಿಗೆ ಕೇಂದ್ರ ಸರ್ಕಾರದಿಂದ ಕೊಡುವ ಪದ್ಮಶ್ರೀ ಪ್ರಶಸ್ತಿ ಅರಸಿ ಬಂದಿದೆ.ಈ ಸಂದರ್ಭ ವಿಧಾನ ಪರಿಷತ್ ಶಾಸಕ ಬಿ.ಎಂ.ಫಾರೂಕ್ ಹಾಗೂ ಜಿಲ್ಲಾ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.