ETV Bharat / state

ಶಾಲೆಯಿಂದ ಬರುತ್ತಿದ್ದ ಬಾಲಕಿ ಮೇಲೆ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್ - Etv Bharat Kannada

ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿದ್ದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ.

ಬಾಲಕಿ ಮೇಲೆ ದೌರ್ಜನ್ಯ
ಬಾಲಕಿ ಮೇಲೆ ದೌರ್ಜನ್ಯ
author img

By

Published : Sep 24, 2022, 3:22 PM IST

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಬಾಲಕಿ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿ ಪದ್ಮನಾಭ ಶಿಕ್ಷೆಗೊಳಗಾದವ. ಕೊಕ್ಕಡ ಗ್ರಾಮದ ಶಾಲೆಯಿಂದ ಬಾಲಕಿ ಮನೆಗೆ ತೆರಳುತ್ತಿರುವ ಸಮಯದಲ್ಲಿ ಈತ ಅಡ್ಡಗಟ್ಟಿ ಕೈಯಿಂದ ಎಳೆದು ದೌರ್ಜನ್ಯ ಎಸಗಿದ್ದ. ಅಲ್ಲದೇ ಬಾಲಕಿಯ ತಂದೆಗೆ ಜೀವ ಬೆದರಿಕೆ ಹಾಕಿದ್ದನು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಪರಾಧಿಗೆ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ : ಈ ಬಗ್ಗೆ ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿ ಮೇಲಿನ ಅಪರಾಧ ಸಾಬೀತಾಗಿದೆ. ನ್ಯಾಯಾಲಯವು ಅಪರಾಧಿಗೆ 3 ವರ್ಷಗಳ ಸಾಧಾರಣ ಕಾರಾಗೃಹ ಹಾಗೂ 500 ರೂ ದಂಡ ವಿಧಿಸಲಾಗಿದೆ.

ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿಯಾದ ಸಹನಾದೇವಿ ಅವರು ಸರ್ಕಾರದ ಪರ ವಾದ ಮಂಡಿಸಿದರು. ಪೊಲೀಸ್ ಉಪನಿರೀಕ್ಷರಾದ ಅವಿನಾಶ್ ಹೆಚ್ ಗೌಡ ಅವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

(ಇದನ್ನೂ ಓದಿ: ಬೆಂಗಳೂರಲ್ಲಿ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಯೋಗ ತರಬೇತುದಾರನಿಗೆ ಜೈಲು ಶಿಕ್ಷೆ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.