ಬೆಳ್ತಂಗಡಿ (ದಕ್ಷಿಣ ಕನ್ನಡ): ಕೊರೊನಾ ವೈರಸ್ ವಿರುದ್ಧ ಹಗಲಿರುಳು ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ 1.25 ಲಕ್ಷ ರೂಪಾಯಿಗಳನ್ನು ನೀಡಿದರು.
ತಾಲೂಕಿನಲ್ಲಿರುವ 250 ಆಶಾ ಕಾರ್ಯಕರ್ತೆಯರು ನಿತ್ಯ ತಮ್ಮ ಸ್ವಂತ ಹಣವನ್ನು ಪ್ರಯಾಣಕ್ಕಾಗಿ ಬಳಸುತ್ತಿದ್ದಾರೆ. ಸರ್ಕಾರದಿಂದ ಅಲ್ಪ ವೇತನವನ್ನು ಪಡೆದು ತಮ್ಮ ಜೀವದ ಹಂಗು ತೊರೆದು ಕೊರೊನಾ ವೈರಸ್ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ.
ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪ್ರಯಾಣ ಭತ್ಯೆಗಾಗಿ ಪ್ರತಿ ಆಶಾ ಕಾರ್ಯಕರ್ತೆಯರಿಗೆ 500 ರೂಪಾಯಿಯಂತೆ 1.25 ಲಕ್ಷ ರೂ. ನೀಡಿದರು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಕಲಾಮಧು , ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಕೆ.ಶೈಲೇಶ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ , ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್, ನಗರ ಪಂಚಾಯತ್ ಮಾಜಿ ನಾಮನಿರ್ದೇಶಿತ ಸದಸ್ಯ ರಮೇಶ್ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.