ETV Bharat / state

ಹಥ್ರಾಸ್​ ಪ್ರಕರಣ ಖಂಡಿಸಿ ಮಂಗಳೂರಲ್ಲಿ ಕಾಂಗ್ರೆಸ್​ ಪ್ರತಿಭಟನೆ: ಕೆಲವರು ಪೊಲೀಸ್​ ವಶಕ್ಕೆ

ಹಥ್ರಾಸ್​ ಅತ್ಯಾಚಾರ ಮತ್ತು ಕೊಲೆ ಆರೋಪ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಪೊಲೀಸರು ಕೆಲ ನಾಯಕರನ್ನು ವಶಕ್ಕೆ ಪಡೆದರು.

Hathras rape and murder case, Hathras rape and murder case news, Hathras rape and murder case latest news, Congress protest, Congress protest in Mangalore, ಹಥ್ರಾಸ್​ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಹಥ್ರಾಸ್​ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸುದ್ದಿ, ಕಾಂಗ್ರೆಸ್​ ಪ್ರತಿಭಟನೆ, ಮಂಗಳೂರಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ,
ಹಥ್ರಾಸ್​ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ
author img

By

Published : Oct 2, 2020, 2:10 PM IST

Updated : Oct 2, 2020, 3:41 PM IST

ಮಂಗಳೂರು: ಉತ್ತರ ಪ್ರದೇಶದ ಹಥ್ರಾಸ್​ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಧರಣಿ ಹಾಗೂ ರಸ್ತೆ ತಡೆ ನಡೆಸಲಾಯಿತು.

ನಗರದ ಹಂಪನಕಟ್ಟೆಯಲ್ಲಿರುವ ಕ್ಲಾಕ್ ಟವರ್ ಮುಂಭಾಗ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಳಗ್ಗೆ ಪ್ರತಿಭಟನೆ ನಡೆಸಿದರು.

ಹಥ್ರಾಸ್​ ಪ್ರಕರಣ ಖಂಡಿಸಿ ಮಂಗಳೂರಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ರಾಹುಲ್ ಗಾಂಧಿಗೆ ಸಂತ್ರಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿಯಾಗಲು ಬಿಡದಿರುವುದನ್ನು ಖಂಡಿಸಿದರು. ಬಳಿಕ ಪ್ರತಿಭಟನಾಕಾರರು ವಾಹನ ಸಂಚಾರ ನಡೆಸದಂತೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಪೊಲೀಸರು ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೊ ಸೇರಿದಂತೆ ಸುಮಾರು 40-50 ರಷ್ಟು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಎರಡು ಪೊಲೀಸ್ ವ್ಯಾನ್​ಗಳಲ್ಲಿ ಕರೆದೊಯ್ದರು.

Last Updated : Oct 2, 2020, 3:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.