ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿಗೆ ಬಲಿಯಾದ ಇಬ್ಬರ ಮನೆಗೆ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಇದೇ ವೇಳೆ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5ಲಕ್ಷ ರೂಪಾಯಿ ಪರಿಹಾರವನ್ನು ಕುಮಾರಸ್ವಾಮಿ ಘೋಷಿಸಿದರು.
ಬಳಿಕ ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಪೊಲೀಸ್ ಗೋಲಿಬಾರ್ ವೇಳೆ ಗಾಯಗೊಂಡವರ ಆರೋಗ್ಯ ವಿಚಾರಿಸಿ, ಘಟನೆಯ ಬಗ್ಗೆ ಮಾಹಿತಿ ಪಡೆದರು.