ಮಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮೊದಲು ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು ಅಲ್ಲಿಂದ ನೇರವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ದರ್ಶನದ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಜೊತೆಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್ ಮತ್ತು ವಿಧಾನಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ ಜೊತೆಗಿದ್ದರು.