ETV Bharat / state

ಕೊರೊನಾ ನಿಯಂತ್ರಣ, ನಿರ್ವಹಣೆಯಲ್ಲಿ ಆರೋಗ್ಯ ಇಲಾಖೆ ಕಾರ್ಯ ಮಹತ್ವದ್ದು: ವಿ.ಪೊನ್ನುರಾಜ್ - ಕೊರೊನಾ ಸಾಂಕ್ರಾಮಿಕ

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಪಾತ್ರ ಪ್ರಮುಖವಾದದ್ದು. ಕೊರೊನಾ ನಿಯಂತ್ರಿಸಲು ಸಿಬ್ಬಂದಿ ವಿಳಂಬವಿಲ್ಲದೆ ಕಾರ್ಯನಿರ್ವಹಿಸಿದಾಗ ಮಾತ್ರ ತಡೆಗಟ್ಟಲು ಸಾಧ್ಯ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಕಾರ್ಯದರ್ಶಿ ವಿ.ಪೊನ್ನುರಾಜ್ ಹೇಳಿದ್ದಾರೆ.

V Ponnuraj
ವಿ. ಪೊನ್ನುರಾಜ್
author img

By

Published : May 25, 2021, 7:05 AM IST

ಮಂಗಳೂರು: ಕೊರೊನಾ ನಿಯಂತ್ರಣ ಕಾರ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ವಿಳಂಬವಿಲ್ಲದೆ ಶೀಘ್ರದಲ್ಲಿ ತಮ್ಮ ತಮ್ಮ ಕಾರ್ಯಗಳನ್ನು ನಿರ್ವಹಿಸಿದಾಗ ಮಾತ್ರ ಸೋಂಕು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್‍ನ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್​ ಹಾಲ್‍ನಲ್ಲಿ ಕೊರೊನಾ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ದೈನಂದಿನ ಸ್ವ್ಯಾಬ್ ಸಂಗ್ರಹ, ಅವುಗಳ ರವಾನೆ, ಪರೀಕ್ಷೆಯ ಫಲಿತಾಂಶ ನಂತರದಲ್ಲಿ ಸೋಂಕು ದೃಢಪಟ್ಟವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಸ್ವ್ಯಾಬ್ ಸಂಗ್ರಹ ಅವುಗಳ ಪರೀಕ್ಷೆಗಳನ್ನು ತ್ವರಿತಗತಿಯಲ್ಲಿ ಕೈಗೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಿದಾಗ ಮಾತ್ರ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಈ ಕಾರ್ಯವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದರು.

ಪ್ರತಿದಿನ ಸ್ವ್ಯಾಬ್ ಎಷ್ಟು ಸಂಗ್ರಹವಾಗುತ್ತಿದೆ. ಯಾವ ಯಾವ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಷ್ಟು ಸಂಗ್ರಹವಾಗುತ್ತಿದೆ. ಅವುಗಳ ಪರೀಕ್ಷೆ ಯಾವಾಗ ಆಗುತ್ತಿದೆ ಎಂಬ ಉಸ್ತುವಾರಿ ಕಾರ್ಯದರ್ಶಿಗಳ ಪ್ರಶ್ನೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮರ್ಪಕ ಉತ್ತರ ನೀಡದೇ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಖರ ಮಾಹಿತಿಯನ್ನು ಹೊಂದುವುದರೊಂದಿಗೆ ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೆಳ ಹಂತದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಮೇಲ್ವಿಚಾರಣೆಯನ್ನು ತಪ್ಪದೇ ಮಾಡಬೇಕು. ಕೆಲವೊಮ್ಮೆ ಸರಿಯಾಗಿ ಕಾರ್ಯನಿರ್ವಹಿಸದಿದ್ದಲ್ಲಿ ಅವರುಗಳಿಗೆ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.

ಇದನ್ನೂ ಓದಿ: ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಸೋಂಕು ದೃಢಪಟ್ಟು ಗುಣಲಕ್ಷಣ ಹೊಂದಿಲ್ಲದ ಹಾಗೂ ಹೊಂದಿರುವ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು. ಅವಶ್ಯವಿದ್ದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ವರ್ಗಾಯಿಸಬೇಕು, ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಆಪೇಕ್ಷಿಸಿದಲ್ಲಿ ಅವರಿಗೆ ಪ್ರತ್ಯೇಕವಾಗಿರಲು ಸೂಚನೆ ನೀಡುವುದರ ಜೊತೆಗೆ ವೈದ್ಯರು ಪ್ರತಿದಿನ ಅವರುಗಳ ಆರೋಗ್ಯದ ಸ್ಥಿತಿಗತಿಗಳನ್ನು ಫೋನ್ ಕರೆ ಮಾಡುವುದರೊಂದಿಗೆ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ಹೊಂದಲು ಸಲಹೆ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರತೀ ಗ್ರಾಮಗಳಲ್ಲಿ ಹಾಗೂ ವಾರ್ಡ್‍ಗಳಲ್ಲಿ ಸೋಂಕಿತರ ಸಂಪರ್ಕ ಹೊಂದಿದವರ ಗುರುತಿಸುವ ಕಾರ್ಯವನ್ನು ಶಾಲಾ ಶಿಕ್ಷಕಿಯರು ಮಾಡುತ್ತಿದ್ದು, ಇವುಗಳ ಮೇಲ್ವಿಚಾರಣೆಯನ್ನು ಪ್ರತಿದಿನ ತಹಶೀಲ್ದಾರರುಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಡಬೇಕು ಎಂದರು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ , ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಿಶೋರ್ ಕುಮಾರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: 'ಗುಂಡು' ಮಕ್ಕಳಿಗೆ ಬೇಸರದ ಸುದ್ದಿ: ಮದ್ಯ ಬಾಟಲಿಗಳ ಸಾಲಾಗಿ ನಿಲ್ಲಿಸಿ ನಾಶಗೈದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.