ETV Bharat / state

ಕೊರೊನಾ ಜಾಗೃತಿಗೆ ಕಾಂಗ್ರೆಸ್​ನಿಂದ ‘ಆರೋಗ್ಯ ಹಸ್ತ’ ಕಾರ್ಯಕ್ರಮ - Health palm Program

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಆರೋಗ್ಯ ಹಸ್ತ ಎಂಬ ಕಾರ್ಯಕ್ರಮಕ್ಕೆ ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಚಾಲನೆ ನೀಡಿದರು.

Health palm Program from Congress
ಕೊರೊನಾ ಜಾಗೃತಿಗೆ ಕಾಂಗ್ರೆಸ್​ನಿಂದ ಆರೋಗ್ಯ ಹಸ್ತ ಕಾರ್ಯಕ್ರಮ
author img

By

Published : Aug 19, 2020, 8:43 AM IST

ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೊರೊನಾ ಜಾಗೃತಿಗೋಸ್ಕರ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಆರಂಭಗೊಂಡ ಆರೋಗ್ಯ ಹಸ್ತ ಕಾರ್ಯಕ್ರಮ ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಮಂಗಳವಾರ ನಡೆಯಿತು.

ಕಾಂಗ್ರೆಸ್​ನಿಂದ ಆರೋಗ್ಯ ಹಸ್ತ ಕಾರ್ಯಕ್ರಮ: ಪರಿಷತ್ ಸದಸ್ಯ ಹರೀಶ್ ಕುಮಾರ್ ಚಾಲನೆ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್​​ ಸದಸ್ಯ ಕೆ.ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಮಾನವೀಯತೆ ದೃಷ್ಟಿಯಿಂದ ಜನರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು. ಮಾಜಿ ಸಚಿವ ರಮಾನಾಥ ರೈ ತರಬೇತುದಾರರಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿ ಸಾರ್ವಜನಿಕರ ಆರೋಗ್ಯದ ಜೊತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸಿದರು. ಡಾ. ರಾಜೇಶ್ ಪೂಜಾರಿ ಪಿಪಿಇ ಕಿಟ್ ಬಳಕೆ ಮತ್ತು ಖಾಯಿಲೆ ತಪಾಸಣೆ ಮಾಡುವ ರೀತಿಯನ್ನು ವಿವರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.