ETV Bharat / state

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಶಾಲಾ-ಕಾಲೇಜಿಗೆ ರಜೆ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಎಚ್ಚರಿಸಿದ್ದು, ನಾಳೆಯೂ ಆರೆಂಜ್ ಅಲರ್ಟ್ ಇರುವುದಾಗಿ ತಿಳಿಸಿದೆ.

ದಕ್ಷಿಣ ಕನ್ನಡ
ದಕ್ಷಿಣ ಕನ್ನಡ
author img

By

Published : Jul 5, 2022, 9:20 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಬುಧವಾರ ( ಜುಲೈ 6 ) ಶಾಲಾ -ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಎಚ್ಚರಿಸಿದ್ದು, ನಾಳೆಯು ಆರೆಂಜ್ ಅಲರ್ಟ್ ಇರುವುದಾಗಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದ್ದು, ಇದು ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದ್ದು, ಭೋಧಕ- ಭೋಧಕೇತರ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇನ್ನು ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಜಿಲ್ಲಾ‌ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು‌ ನಿರ್ವಹಣೆಯನ್ನು ಚಾಚುತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಆದೇಶಿಸಲಾಗಿದೆ.

ಓದಿ: ಸಾರಿಗೆ ಸಂಸ್ಥೆಗಳ ಸುಧಾರಣೆ, ಸಮಿತಿ ಸಲಹೆ ಜಾರಿ ಕುರಿತು ಸಂಪುಟದಲ್ಲಿ ಚರ್ಚೆ: ಸಿಎಂ..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.