ETV Bharat / state

ಭಾರಿ ಮಳೆ... ರೆಡ್ ಅಲರ್ಟ್ .. ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಹವಾಮಾನ ಇಲಾಖೆ , ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವೂ ಭಾರಿ ಮಳೆ ಮುನ್ಸೂಚನೆ ನೀಡಿದ್ದು, ಮುಂದಿನ ಜುಲೈ 4 ರಿಂದ 5 ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Record rainfall in Bhatkal
ಭಟ್ಕಳದಲ್ಲಿ ಮಂಗಳವಾರ ದಾಖಲೆ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತ.
author img

By

Published : Jul 4, 2023, 10:18 PM IST

ಭಾರಿ ಮಳೆ... ರೆಡ್ ಅಲರ್ಟ್ .. ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಪ್ರೌಢಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೇ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಮುನ್ಸೂಚನೆ ನೀಡಿದ್ದಾರೆ.

ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ: ಅಲ್ಲದೇ ಮುಂದಿನ ದಿನಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜೊತೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಈ ಮೂಲಕ ಸೂಚನೆ ನೀಡಿದ್ದಾರೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಇನ್ನು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಲಾಗಿದ್ದು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿ, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರತಕ್ಕದ್ದು ಎಂದು ಕಟ್ಟಪ್ಪಣೆ ಹೊರಡಿಸಲಾಗಿದೆ.

ಪ್ರವಾಸಿಗರು , ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆಯೂ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077/ 0824 2442590 ದೂರವಾಣಿಯನ್ನು ಸಂಪರ್ಕಿಸುವಂತೆ ದ.ಕ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಟ್ಕಳದಲ್ಲಿ ದಾಖಲೆ ಮಳೆ ಜನಜೀವನ ಅಸ್ತವ್ಯಸ್ತ: ಭಟ್ಕಳ (ಉತ್ತರಕನ್ನಡ): ಇನ್ನು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಆರಂಭಗೊಂಡಿದೆ. ಭಟ್ಕಳದಲ್ಲಿ ಸಹ ಭಾರಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾರವಾರ ಜಿಲ್ಲೆ ಭಟ್ಕಳ ಪಟ್ಟಣದ ಮುಖ್ಯ ಪೇಟೆ ರಸ್ತೆಗಳೆಲ್ಲ ನೀರಿನಿಂದಾವ್ರತವಾಗಿದ್ದವು. ರಸ್ತೆ ಎಲ್ಲೆಡೆ ನೀರು ಹರಿದು ವಾಹನ ಸಂಚಾರರಿಗೆ ತೀವ್ರ ತೊಂದರೆ ಉಂಟಾಗಿದೆ. ಮಂಗಳವಾರದಂದು ಒಂದೇ ದಿನ ದಾಖಲೆಯ ಮಳೆ ಬಿದ್ದು, ಜನರಿಗೆ ಕಿರಿಕಿರಿ ಅನುಭವಿಸಿದರು.

ತಾಲೂಕಿನಲ್ಲಿ ಮುಂಜಾನೆಯಿಂದ ಎಡೆ ಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರ‌‌ ಓಡಾಟಕ್ಕೆ ಬ್ರೇಕ್ ಬಿದ್ದಂತಾಗಿದೆ. ಸಂಶುದ್ದೀನ್ ಸರ್ಕಲ್ ಪ್ರತಿ ವರ್ಷ ಸುರಿಯವ ಭಾರಿ ಮಳೆಗೆ ಹರಕೆಯಂತೆ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ಇದರಿಂದಾಗಿ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.

ಪ್ರತಿ ವರ್ಷದ ಈ ಅವ್ಯವಸ್ಥೆಗೆ ಪುರಸಭೆ ಮಾತ್ರ ಎಚ್ಚೆತ್ತುಕೊಳ್ಳದೇ ರಸ್ತೆಯ ತುಂಬೆಲ್ಲ ನೀರು ನಿಂತಿದೆ. ಇನ್ನು ರಘುನಾಥ ದೇವಸ್ಥಾನದ ಹತ್ತಿರ ಯುಜಿಡಿ ಅವೈಜ್ಞಾನಿಕ ಕಾಮಗಾರಿಯಿಂದ ದೊಡ್ಡಗಾತ್ರದ ಹೊಂಡಗಳು ಬಿದ್ದಿದ್ದು ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು. ಇನ್ನು ಅಂಗಡಿ ವ್ಯಾಪಾರಸ್ಥರಿಗೂ, ಹೊಟೇಲ್ ಮಾಲೀಕರಿಗೂ ಸಹ ದಿನವಿಡಿ ಸುರಿದ ಮಳೆ ವ್ಯಾಪಾರಕ್ಕೆ ಅಡ್ಡಿಯುಂಟು ಮಾಡಿದ್ದು, ಬೀದಿ ಬದಿ ವ್ಯಾಪಾರಿಗಳು ಮಳೆಯಲ್ಲಿಯೇ ವ್ಯಾಪಾರಕ್ಕೆ ಇಳಿದಿರುವುದು ಕಂಡು ಬಂತು.

ಇದನ್ನೂಓದಿ:ಮಂಗಳೂರಿನಲ್ಲಿ ಭಾರಿ ಮಳೆಗೆ ಪಂಪ್​ವೆಲ್​ ಜಲಾವೃತ: ಟ್ರಾಫಿಕ್ ಜಾಮ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.