ಬಂಟ್ವಾಳ: ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ತಾಲೂಕಿನ ಸಜೀಪನಡು ಗ್ರಾಮದ ಬೈಲಗುತ್ತು ಎಂಬಲ್ಲಿ ಮನೆಯೊಳಗೆ ನೀರು ನುಗ್ಗಿದ್ದು, ಜೆಸಿಬಿ ಮೂಲಕ ಚರಂಡಿಯನ್ನು ಅಗಲಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಯಿತು.
ಶಾಸಕ ಯು.ಟಿ. ಖಾದರ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮಟ ಕಾಟಿಪಳ್ಳ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೋಣು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ಮತ್ತಿಹಳ್ಳಿ ಸಿಬ್ಬಂದಿ ಅಶೋಕ, ಶೀತಲ್ ಉಪಸ್ಥಿತರಿದ್ದರು.