ಸುಬ್ರಹ್ಮಣ್ಯ: ಪಶ್ಚಿಮಘಟ್ಟ ಸೇರಿದಂತೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರಾ ನದಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನದಿಗಳೂ ತುಂಬಿ ಹರಿಯುತ್ತಿವೆ.
ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ನಿನ್ನೆ ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕುಮಾರಧಾರಾ ನದಿಯ ಹೊಸಮಠ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ. ಭೀಕರ ಗಾಳಿ ಮಳೆಗೆ ಮನೆ, ವಾಹನಗಳು ಹಾನಿಯಾಗಿದೆ. ಭಾರೀ ಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಹೀಗಾಗಿ ಹಲೆವೆಡೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯವಾಗಿದೆ.
ಇದೇ ರೀತಿಯಾಗಿ ಮಳೆ ಮುಂದುವರಿದರೇ ಹಲವು ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ನದಿ ತೀರದ ಬಹುತೇಕ ಕೃಷಿ ಭೂಮಿಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.