ETV Bharat / state

ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ: ಅಣೆಕಟ್ಟಿನಲ್ಲಿ ಜಲಸಮೃದ್ಧಿ, ನದಿ ನೀರಿನ ಮಟ್ಟ ಹೆಚ್ಚಳ - water level in rivers increased

ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ, ಕುಮಾರಧಾರಾ, ಗುಂಡ್ಯ ಹೊಳೆಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

dam
dam
author img

By

Published : Aug 6, 2020, 12:22 PM IST

ಬಂಟ್ವಾಳ (ದ.ಕ): ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಎನಿಸಿದ ನೇತ್ರಾವತಿ ಸಹಿತ ಕುಮಾರಧಾರಾ, ಗುಂಡ್ಯ ಹೊಳೆಗಳಲ್ಲಿ ನೀರು ಹೆಚ್ಚಾಗಿದ್ದು, ಅಣೆಕಟ್ಟುಗಳಲ್ಲಿ ಸಮೃದ್ಧ ನೀರಿನ ಹರಿವು ಕಾಣಿಸುತ್ತಿದೆ.

ಗುರುವಾರ ಬೆಳಗಿನ ವರದಿಯಂತೆ ಬಂಟ್ವಾಳದಲ್ಲಿ ನೇತ್ರಾವತಿ 7.6 ಮೀಟರ್ (ಅಪಾಯದ ಮಟ್ಟ 8.5 ಮೀ.), ಉಪ್ಪಿನಂಗಡಿಯಲ್ಲಿ ನೇತ್ರಾವತಿ 29 ಮೀಟರ್ (ಅಪಾಯದ ಮಟ್ಟ 31.5 ಮೀಟರ್), ಉಪ್ಪಿನಂಗಡಿಯಲ್ಲಿ ಕುಮಾರಧಾರಾ 24 ಮೀಟರ್ (ಅಪಾಯದ ಮಟ್ಟ 26.5 ಮೀ.) ಎತ್ತರದಲ್ಲಿ ಹರಿಯುತ್ತಿದ್ದರೆ, ಗುಂಡ್ಯ ಹೊಳೆ 4.7 ಮೀಟರ್ (ಅಪಾಯದ ಮಟ್ಟ 5 ಮೀಟರ್) ಎತ್ತರದಲ್ಲಿ ಹರಿಯುತ್ತಿದೆ.

ನದಿ ನೀರಿನ ಮಟ್ಟ ಹೆಚ್ಚಳ

ನೀರಕಟ್ಟೆಯ ಸಾಗರ್ ಡ್ಯಾಂನಲ್ಲಿ 34 ಮೀಟರ್​ನಷ್ಟು ನೀರು ಸಂಗ್ರಹವಿದ್ದು (ಗರಿಷ್ಠ 38 ಮೀಟರ್), ಕಡಬದ ದಿಶಾ ಡ್ಯಾಂನಲ್ಲಿ 4.7 ಮೀಟರ್ (ಗರಿಷ್ಠ 5 ಮೀಟರ್) ಇದ್ದರೆ, ಶಂಭೂರಿನ ಎಎಂಆರ್ ಡ್ಯಾಂನಲ್ಲಿ 18.9 ಮೀಟರ್ (ಗರಿಷ್ಠ 18.9 ಮೀ.) ನೀರು ಸಂಗ್ರಹವಿದೆ.

heavy rain in dakhina kannada
ಅಣೆಕಟ್ಟಿನಲ್ಲಿ ಜಲಸಮೃದ್ಧಿ

ಶಂಭೂರು ಡ್ಯಾಂನ 8 ಗೇಟ್​ಗಳನ್ನು ಶೇ.50ರಷ್ಟು ಹಾಗೂ 1 ಗೇಟ್ ಅನ್ನು ಶೇ.40ರಷ್ಟು ತೆರೆಯಲಾಗಿದೆ. ಮಂಗಳೂರಿಗೆ ನೀರು ಸರಬರಾಜು ಮಾಡುವ ತುಂಬೆ ಡ್ಯಾಂನಲ್ಲಿ 6.4 ಮೀಟರ್ (ಗರಿಷ್ಠ 7ಮೀ) ನೀರು ಸಂಗ್ರಹವಿದ್ದು, ಇಲ್ಲಿರುವ ಎಲ್ಲ ಗೇಟ್​ಗಳನ್ನು ತೆರೆಯಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಮಳೆ ಕಡಿಮೆ ಹಾಗೂ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಸಂಗ್ರಹವಾಗಿದೆ.

ಕಳೆದ ವರ್ಷ ತುಂಬೆ ಡ್ಯಾಂನಲ್ಲಿ 10 ಮೀಟರ್ ನೀರು ಹರಿದಿದ್ದರೆ, ಈ ವರ್ಷ 6.5 ಮೀಟರ್ ನೀರು ಸಂಗ್ರಹವಾಗಿದೆ. ಆದರೆ ಘಟ್ಟ ಪ್ರದೇಶದಲ್ಲಿ ಮಳೆ ಬಂದರೆ ಇದು ಹೆಚ್ಚಾಗುವ ಸಂಭವವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.