ETV Bharat / state

ಧಾರಾಕಾರ ಮಳೆ: ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ, ಶಾಲಾ ಕಾಲೇಜಿಗೆ ರಜೆ ಘೋಷಣೆ - ದಕ್ಷಿಣ ಕನ್ನಡ ಶಾಲಾ ಕಾಲೇಜಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ. ಇಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ.

ಧಾರಾಕಾರ ಮಳೆ Mangaluru rain
ಧಾರಾಕಾರ ಮಳೆ
author img

By

Published : Jul 7, 2023, 7:44 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಆರಂಭವಾದ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.

ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಕೆರೆಯಲ್ಲಿ ಮುಳುಗಿ ಗುರುವಾರ ಮೃತಪಟ್ಟಿದ್ದಾರೆ. ವಿಶೇಷಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ಬುಧವಾರ ಸಂಜೆಯಿಂದ ಕಾಣೆಯಾಗಿದ್ದ ಅವರ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಗುರುವಾರ ಬೆಳಗ್ಗೆ ತೋಟದ ಕೆರೆಗೆಯಲ್ಲಿ ಶವ ಪತ್ತೆಯಾಗಿದೆ.

ಮಳೆ ನೀರು ತುಂಬಿ ಹರಿಯುತ್ತಿದ್ದ ತನ್ನ ಮನೆ ಸಂಪರ್ಕದ ಮೋರಿಯನ್ನು ದಾಟುವ ವೇಳೆ ಆಯತಪ್ಪಿ ಮೋರಿಯೊಳಗೆ ಬಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಸುರೇಶ್ ಗಟ್ಟಿ (53 ವರ್ಷ)‌ ಮೃತಪಟ್ಟಿದ್ದರು. ಜು.4 ರಂದು ಸಂಜೆ ಸುಮಾರು 7.30ಕ್ಕೆ ಈ ಘಟನೆ ನಡೆದಿತ್ತು. ಕುಳಾಯಿ ಗ್ರಾಮದ ಸಂತೋಷ್ (34) ಎಂಬವರು ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್‌ ದೀಪದ ತಂತಿ ತಗುಲಿ ಮರಣ ಹೊಂದಿದ್ದರು.

ಓರ್ವ ನೀರುಪಾಲು: ಧಾರಾಕಾರ ಸುರಿಯುತ್ತಿರುವ ಮಳೆಗೆ ಸುಳ್ಯದ ಆಲೆಟ್ಟಿಯ ಕೂರ್ನಡ್ಕ ಬಳಿ ವ್ಯಕ್ತಿಯೊಬ್ಬರು ನೀರುಪಾಲಾಗಿದ್ದಾರೆ. ಹೊಳೆ ದಾಟುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ನೀರುಪಾಲಾದ ವ್ಯಕ್ತಿ ಕೇರಳ ಮೂಲದವರು ಎಂದು ಹೇಳಲಾಗಿದೆ. ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ. ನೀರುಪಾಲಾದ ವ್ಯಕ್ತಿಯ ಶೋಧ ಕಾರ್ಯ ಮುಂದುವರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಶಾಲೆ ಪಿಯು ಕಾಲೇಜುಗಳಿಗೆ ರಜೆ
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯು ತರಗತಿಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಮುನ್ಸೂಚನೆ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜೊತೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಈ ಮೂಲಕ ಸೂಚನೆ ನೀಡಿದ್ದಾರೆ.

ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿ, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077/ 0824 2442590 ದೂರವಾಣಿಯನ್ನು ಸಂಪರ್ಕಿಸುವಂತೆ ದ.ಕ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Monsoon: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ: ಸುಬ್ರಹ್ಮಣ್ಯ ಸ್ನಾನಘಟ್ಟ, ಬಪ್ಪನಾಡು‌ ದೇವಸ್ಥಾನ ಜಲಾವೃತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.