ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ( ಜು.11) ಶಾಲೆಗೆ ಮಾತ್ರ ರಜೆ ಘೋಷಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 12 ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಯ ಹಲವೆಡೆ ನೆರೆಗಳು ಕಾಣಿಸಿಕೊಂಡಿದ್ದು, ಹಲವೆಡೆ ಮನೆಗಳು, ಕೃಷಿಭೂಮಿಗಳು ಜಲಾವೃತವಾಗಿವೆ. ಭಾರಿ ಮಳೆ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ : ಕಬಿನಿ ಜಲಾಶಯ ತುಂಬಲು ಎರಡೇ ಅಡಿ ಬಾಕಿ... ನದಿ ಪಾತ್ರದ ಜನರಲ್ಲಿ ಭೀತಿ