ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರೆದಿದೆ. ಸತತ ನಾಲ್ಕು ದಿನಗಳಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಈ ಎಚ್ಚರಿಕೆಯು ಭಾನುವಾರ ಬೆಳಗ್ಗೆವರೆಗೆ ಇರಲಿದೆ.
ಮಳೆಯ ಅಬ್ಬರಕ್ಕೆ ಕೆಲವೆಡೆ ಕಡಲ್ಕೊರೆತ ಹೆಚ್ಚಾಗಿದ್ದು, ನದಿಗಳು ತುಂಬಿ ಅಲ್ಲಲ್ಲಿ ನೆರೆ ಆವರಿಸಿದೆ. ಕಳೆದ ಆರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಂಗಳವಾರದಿಂದ ಇಂದಿನವರೆಗೆ ಶಾಲಾ ಕಾಲೇಜುಗೆ ರಜೆ ನೀಡಲಾಗಿದೆ.
ವಿಮಾನ ಡೈವರ್ಟ್: ಭಾರಿ ಮಳೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮಂಗಳೂರಿನಲ್ಲಿ ಇಳಿಯಬೇಕಿದ್ದ ದುಬೈ ವಿಮಾನವನ್ನು ಕೊಚ್ಚಿನ್ಗೆ ಡೈವರ್ಟ್ ಮಾಡಲಾಗಿದೆ. ದುಬೈನಿಂದ ಮಂಗಳೂರಿಗೆ ಬಂದಿದ್ದ ಸ್ಪೈಸ್ ಜೆಟ್ ವಿಮಾನ ರಾತ್ರಿ 9.30ಕ್ಕೆ ಮಂಗಳೂರು ತಲುಪಿದ್ದು, ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಮಾಡಲು ಸಾಧ್ಯವಾಗಿಲ್ಲ.
ಇದನ್ನೂ ಓದಿ: ರಾಜ್ಯಾದ್ಯಂತ ವರುಣಾರ್ಭಟಕ್ಕೆ ತತ್ತರಿಸಿದ ಜನ.. ಕರಾವಳಿ, ಕಲಬುರಗಿಯಲ್ಲಿ ರೆಡ್ ಅಲರ್ಟ್