ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರಿ ಮಳೆಯಿಂದ ನೀರಿನಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ವರುಣನ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಜುಲೈ 1) ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ನಗರದ ಪೊಲೀಸ್ ಕ್ವಾರ್ಟರ್ ಸಮೀಪದ ದೈವತ್ ಎಂಬವರ ಮಗ ಸುನಿಲ್ (46) ತೋಡಿಗೆ ಬಿದ್ದು ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ಮೂಲ್ಕಿಯ ಕೊಲ್ನಾಡು ಕೆ.ಎಸ್. ರಾವ್ ನಗರದಲ್ಲಿ ಘಟನೆ ನಡೆದಿದೆ. ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ದಾರಿಹೋಕರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಮೂಲ್ಕಿ ಪೊಲೀಸರು ಸ್ಥಳ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಲಾ ಕಾಲೇಜಿಗೆ ರಜೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಅಂಗನವಾಡಿ ಕೇಂದ್ರ, ಶಾಲೆ, ಪಿಯುಸಿ ಮತ್ತು ಪದವಿ ತರಗತಿಗಳಿಗೆ ರಜೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ರಾಜ್ಯಾದ್ಯಂತ ಜುಲೈ 4ರ ವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಇಂದು ಶಾಲೆಗೆ ವಿದ್ಯಾರ್ಥಿಗಳು ತೆರಳಿದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗೆ ರಜೆ ಘೋಷಿಸಿರಲಿಲ್ಲ. ಶಾಲೆಗೆ ಹೋಗಲು ಅನಾನುಕೂಲವಾಗುವ ಪ್ರದೇಶಗಳಲ್ಲಿ ಮಾತ್ರ ರಜೆ ಘೋಷಿಸಲಾಗಿತ್ತು. ಪಿಯುಸಿ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇಂದು ರಜೆ ನೀಡಲಾಗಿತ್ತು. ನಾಳೆಯೂ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಮದರಸಾದಿಂದ ವಾಪಸ್ ಆಗುತ್ತಿದ್ದವನ ಮೇಲೆ ಹಲ್ಲೆ ಕೇಸ್ಗೆ ಟ್ವಿಸ್ಟ್: ಬಾಲಕನ ಕಿತಾಪತಿ ಏನ್ ಗೊತ್ತಾ!?