ಮಂಗಳೂರು: ಲಕ್ಷದ್ವೀಪದಿಂದ ರಾಜ್ಯದ ಕರಾವಳಿಯವರೆಗೆ ಗಾಳಿಯ ಒತ್ತಡ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆಯಿಂದ ಕರಾವಳಿಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದವರೆಗೆ ಪ್ರತಿಕೂಲ ಹವಾಮಾನವಿರುವ ಕಾರಣ ದ.ಕ.ಜಿಲ್ಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಏಕಾಏಕಿ ಧಾರಾಕಾರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಪೆರ್ಮನ್ನೂರಿನಲ್ಲಿ ಮನೆಯೊಂದು ಕುಸಿದು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಲ್ಲದೆ ಉಳ್ಳಾಲಬೈಲು ಎಂಬಲ್ಲಿ ಮನೆಯೊಂದಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.