ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಮಂಗಳೂರಿನ ಅಡ್ಯಾರ್ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಒಂದು ಲಕ್ಷಕ್ಕೂ ಅಧಿಕ ಮಂದಿ ಪ್ರತಿಭಟನಾ ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಉಡುಪಿ, ಕಾರವಾರ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಅಡ್ಯಾರ್ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 40 ಡಿಎಸ್ಪಿಗಳು, 80 ಇನ್ಸ್ಪೆಕ್ಟರ್ ಗಳು, 200 ಸಬ್ ಇನ್ ಸ್ಪೆಕ್ಟರ್ ಗಳು, 300 ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಗಳು ಸಾರ್ವಜನಿಕರ ಹಿತಾಸಕ್ತಿಯಿಂದ, ಭದ್ರತಾ ದೃಷ್ಟಿಯಿಂದ ಸಂಪೂರ್ಣ ಸಂಖ್ಯೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ನಿಯೋಜನೆ ಮಾಡಿದೆ. ಅದೇ ರೀತಿ ಕೇಂದ್ರೀಯ ಅರೆಸೇನಾ ಪಡೆಯ ಮೂರು ತುಕಡಿಗಳು, ಕೆಎಸ್ಆರ್ಪಿ, ಸಿಎಆರ್ ಗಳನ್ನು ಭದ್ರತೆಯ ಹಿನ್ನೆಲೆಯಲ್ಲಿ ನಿಯೋಜಿಸಲಾಗಿದೆ.