ETV Bharat / state

ದ.ಕ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಕೋವಿಡ್ ಕೇಸ್ ದಾಖಲು - Karnataka Covid

ಕೇರಳದಲ್ಲಿ ಕೋವಿಡ್ ಅಬ್ಬರಿಸುತ್ತಿದೆ. ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಕಂಡು ಬಂದಿದೆ. ಇದರಿಂದ ಕೋವಿಡ್ ಮೂರನೇ ಅಲೆಯ ಆತಂಕ ಎದುರಾಗಿದೆ.

covid increases
ಕೋವಿಡ್ ಹೆಚ್ಚಳ
author img

By

Published : Aug 2, 2021, 7:03 AM IST

ಮಂಗಳೂರು: ಪಕ್ಕದ ಕೇರಳ ರಾಜ್ಯದಲ್ಲಿ ಕೋವಿಡ್​ ಮೂರನೇ ಅಲೆಯ ಆತಂಕದ ನಡುವೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿದೆ.

Highest number of Covid case reported in D.K District
ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್

ನಿನ್ನೆ (ಭಾನುವಾರ) ಜಿಲ್ಲೆಯಲ್ಲಿ 410 ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಆರು ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,430 ಮಂದಿ ಕೋವಿಡ್​ನಿಂದ ಮೃತಪಟ್ಟಿದ್ದಾರೆ. ಪ್ರಸ್ತುತ 2,943 ಮಂದಿ ಸಕ್ರಿಯ ಪ್ರಕರಣಗಳಿವೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣ ಕಂಡು ಬಂದಿತ್ತು. ಭಾನುವಾರದ ವರದಿಯಲ್ಲಿ ಬೆಂಗಳೂರಿನ ಪ್ರಕರಣಗಳ ಸಂಖ್ಯೆ 400 ರ ಒಳಗಿದ್ದು, ದಕ್ಷಿಣ ಕನ್ನಡದಲ್ಲಿ ಹೆಚ್ಚಳವಾಗಿದೆ.

ಇದನ್ನೂ ಓದಿ : ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ: ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರ ರದ್ದು

ಪಕ್ಕದ ಕೇರಳದಲ್ಲಿ ಪ್ರತಿದಿನ ದೇಶದಲ್ಲಿಯೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಕೇರಳದ ಗಡಿ ಜಿಲ್ಲೆಯಾಗಿರುವುದರಿಂದ ಸೋಂಕು ದಕ್ಷಿಣ ಕನ್ನಡಕ್ಕೆ ಹರಡುತ್ತಿದೆಯೇ ಎಂಬ ಭೀತಿ ಶುರುವಾಗಿದೆ. ಗಡಿ ಭಾಗದಲ್ಲಿ ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದೆ. ಅಲ್ಲದೆ ಜಿಲ್ಲೆಯಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.