ಮಂಗಳೂರು: ಮಂಗಳೂರಿನಿಂದ ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಆಗಸ್ಟ್ 14 ರವರೆಗೆ ವಾಹನ ಸಂಚಾರ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು ವಿಲ್ಲುಪುರಂ ಹೆದ್ದಾರಿಯಲ್ಲಿ ಬರುವ ಚಾರ್ಮಾಡಿ ಘಾಟ್ನಲ್ಲಿ ನಿರಂತರವಾಗಿ ಗುಡ್ಡ ಕುಸಿತ, ಮರಗಳ ಧರೆಗುರುಳುತ್ತಿವೆ. ಅಷ್ಟೇ ಅಲ್ಲ ಈ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ, ಇನ್ನಷ್ಟು ಮರಗಳು ಬೀಳುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ನಲ್ಲಿ ಸಂಚಾರ ನಿಷೇಧಿಸಲಾಗಿದೆ.