ETV Bharat / state

ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಧನ್ವಂತ್ ಸಿಂಗ್​ಗೆ ಗೌರವ ಡಾಕ್ಟರೇಟ್

ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಬೆಂಗಳೂರಿನ ಅಫೆಕ್ಸ್ ಫೌಂಡೇಶನ್​ ಅಧ್ಯಕ್ಷ ಧನ್ವಂತ್ ಸಿಂಗ್ ಅವರಿಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಎ.ಶಾಮರಾವ್ ಫೌಂಡೇಶನ್, ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Mangalore Srinivasa University
ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಧನ್ವಂತ್ ಸಿಂಗ್​ಗೆ ಗೌರವ ಡಾಕ್ಟರೇಟ್
author img

By

Published : Apr 18, 2021, 10:26 AM IST

ಮಂಗಳೂರು: ಉಡುಪಿಯ ಅಷ್ಟ ಮಠಗಳಲ್ಲೊಂದಾದ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಬೆಂಗಳೂರಿನ ಅಫೆಕ್ಸ್ ಫೌಂಡೇಶನ್​ ಅಧ್ಯಕ್ಷ ಧನ್ವಂತ್ ಸಿಂಗ್ ಅವರಿಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಧನ್ವಂತ್ ಸಿಂಗ್​ಗೆ ಗೌರವ ಡಾಕ್ಟರೇಟ್

ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕಿಂಗ್ ಸಾಲ ಯೋಜನೆ, ಹಣಕಾಸು ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್.ಅವರಿಗೆ 2021ನೇ ಸಾಲಿನ ಎ.ಶಾಮರಾವ್ ಸ್ಮಾರಕ ಸಾಧಕ ಪ್ರಶಸ್ತಿ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿಭಾಗ ಹಾಗೂ ಬ್ರಹ್ಮಾವರದ ಲಿಟಲ್ ರಾಕ್ ಇಂಡಿಯನ್ ಸ್ಕೂಲ್‍ನ ಶಿಕ್ಷಕ ಹರಿಕೃಷ್ಣ ದಂಬೆಯವರಿಗೆ ಎ. ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಎ.ಶಾಮರಾವ್ ಫೌಂಡೇಶನ್, ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಛೇರ್ಮನ್​ ಅಲೆನ್ ಸಿ. ಎ.ಪಿರೇರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಶಿಕ್ಷಣ ಹಾಗೂ ಬ್ಯಾಂಕಿಂಗ್ ಕ್ಷೇತ್ರವು ಸಮಾಜದ ಎರಡು ಮುಖ್ಯ ಆಧಾರ ಸ್ತಂಭಗಳಿದ್ದಂತೆ. ಶಿಕ್ಷಣವು ಸಮಾಜಕ್ಕೆ ಉತ್ತಮ ಭವಿಷ್ಯವನ್ನು ನೀಡಿದರೆ, ಬ್ಯಾಂಕಿಂಗ್ ಕ್ಷೇತ್ರವು ಸಮಾಜದಲ್ಲಾಗುವ ಉತ್ಪಾದನೆ ಹಾಗೂ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಸಹಕರಿಸುತ್ತದೆ. ಅಲ್ಲದೆ ಶಿಕ್ಷಣ ಸಂಸ್ಥೆಗಳು ತಮ್ಮ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಜೀವನಕ್ಕೆ ಬೇಕಾಗಿರುವ ಜ್ಞಾನ ಹಾಗೂ ಬದುಕಲು ಬೇಕಾಗಿರುವ ಕೌಶಲ್ಯವನ್ನು ನೀಡಬೇಕು ಎಂದರು.

ಇದೇ ವೇಳೆ ಶ್ರೀನಿವಾಸ ವಿಶ್ವವಿದ್ಯಾಲಯದ ವಾರ್ಷಿಕ ಸಂಶೋಧನಾ ವರದಿ 2020ರ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಅಲ್ಲದೇ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ್ ರಾವ್, ಕುಲಸಚಿವ ಡಾ.ಅಜಯ್ ಕುಮಾರ್, ಕುಲಪತಿ ಡಾ.ಪಿ.ಎಸ್.ಐತಾಳ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ವಿಜಯಲಕ್ಷ್ಮಿ ಆರ್. ರಾವ್, ಪ್ರೊ.ಎ.ಸುಮಿತ್ರಾ ಎಸ್. ರಾವ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.