ETV Bharat / state

ಬೆಳ್ತಂಗಡಿ: ಎಸ್​​​ಎಸ್ಎಲ್​​​​ಸಿಯಲ್ಲಿ ಹೆಚ್ಚು ಅಂಕಗಳಿಸಿದ 18 ವಿದ್ಯಾರ್ಥಿಗಳಿಗೆ ಸನ್ಮಾನ - Campus Front of India

ಬೆಳ್ತಂಗಡಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಎಸ್ಎಸ್ಎಲ್​​​​ಸಿಯಲ್ಲಿ ಉತ್ತಮ ಅಂಕ ಪಡೆದ ಸುಮಾರು ಹದಿನೆಂಟು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
author img

By

Published : Aug 22, 2020, 12:55 PM IST

ಬೆಳ್ತಂಗಡಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿ, SDPIನ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವವರು, ಉತ್ತಮ ಸಾಧನೆ ಮಾಡಿ ಸಮಾಜಕ್ಕೆ ಉಪಕಾರವಾಗುವಂತಹ ಕೊಡುಗೆಯನ್ನು ನೀಡಬೇಕು ಎಂದರು.

ಇನ್ನು ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಪಡೆದ ಸುಮಾರು ಹದಿನೆಂಟು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ವೇಳೆ, ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹಿರ್, ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ, ಸಾಧಿಕ್ ಜರತ್ತಾರ್, ಬೆಳ್ತಂಗಡಿ ಜಿಲ್ಲೆ ಸಮಿತಿ ಸದಸ್ಯರಾದ ಇಮ್ರಾನ್ ಪಾಂಡವರಕಲ್ಲು, ಜಾಹೀದ್ ಹಾಗೂ ಉಸ್ಮಾನ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.