ETV Bharat / state

ಮಂಗಳೂರು ನಗರದ ಈ ಪ್ರದೇಶಗಳಲ್ಲಿ ಹಾರ್ನ್ ಮಾಡುವಂತಿಲ್ಲ: ಪೊಲೀಸ್ ಆಯುಕ್ತರ ಆದೇಶ - ಶಬ್ದ ಮಾಲಿನ್ಯ ತಡೆಗೆ ಕ್ರಮ

No Horn zones in Mangaluru: ಮಂಗಳೂರು ನಗರದ ವಿವಿಧೆಡೆ ಹಾರ್ನ್ ನಿಷೇಧಿತ ಪ್ರದೇಶ ಘೋಷಣೆ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

Mangalore city
ಮಂಗಳೂರು ನಗರದ ವಿವಿಧೆಡೆ ಹಾರ್ನ್ ನಿಷೇಧಿತ ಪ್ರದೇಶ ಘೋಷಣೆ
author img

By ETV Bharat Karnataka Team

Published : Nov 21, 2023, 11:32 AM IST

ಮಂಗಳೂರು: ನಗರದ ಕೆಲವು ಪ್ರದೇಶಗಳಲ್ಲಿ ಅನಾವಶ್ಯಕವಾಗಿ ಹಾರ್ನ್ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ. ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಚೇರಿಗಳಲ್ಲಿನ ಕಾರ್ಯಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯ ತಡೆಗಟ್ಟುವ ಸಲುವಾಗಿ ವಿವಿಧ ಪ್ರದೇಶಗಳನ್ನು 'ಹಾರ್ನ್ ನಿಷೇಧಿತ ಪ್ರದೇಶ' (No Horn Zone) ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಾರ್ನ್ ನಿಷೇಧಿತ ಪ್ರದೇಶಗಳು:

1) ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲ ಪ್ರದೇಶ:

  • ರಾವ್ & ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.
  • ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್​ವರೆಗೆ.
  • ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್​ವರೆಗೆ.

2) ಹಂಪನಕಟ್ಟೆ ಜಂಕ್ಷನ್‌:

  • ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್ ವರೆಗಿನ ಪ್ರದೇಶ.
  • ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್‌ನಿಂದ (Causality Gate) ಮುತ್ತಪ್ಪ ಗುಡಿಯ ಪ್ರದೇಶ.
  • ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನ ಸೌಧ ಕಟ್ಟಡದವರೆಗೆ.

3) ಡಾ.ಅಂಬೇಡ್ಕರ್ ವೃತ್ತದ ಸುತ್ತಲ ಪ್ರದೇಶ:

  • ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
  • ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
  • ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
  • ಬಾವುಟಗುಡ್ಡ (ಮಹಿಳಾ ಸಭಾ ಕಟ್ಟಡ) ದಿಂದ ಅಂಬೇಡ್ಕರ್ ವೃತ್ತದವರೆಗೆ.

4) ವಿವಿಧ ಆಸ್ಪತ್ರೆಗಳ ಸುತ್ತಲ ಪ್ರದೇಶ:

  • ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್( ಅತ್ತಾವರ ನ್ಯೂ ರೋಡ್) ತಿರುವಿನವರೆಗೆ.
  • ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ.
  • ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ.

ವಾಹನ ಚಾಲಕರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ. ಭಾರತೀಯ ಮೋಟಾರು ವಾಹನ ಅಧಿನಿಯಮ (ತಿದ್ದುಪಡಿ) 2019ರ ಕಲಂ 194 (ಎಫ್)ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ 1,000 ರೂ. ದಂಡವನ್ನು ಹಾಗೂ ಎರಡನೇಯ ಹಾಗೂ ತದನಂತರದ ಪ್ರತಿ ಉಲ್ಲಂಘನೆಗೆ 2,000 ರೂ. ದಂಡ ವಿಧಿಸಲಾಗುವುದು ಎಂದು ನಗರ ಪೊಲೀಸ್ ‌ಕಮಿಷನರ್ ಅನುಪಮ್‌ ಅಗರ್‌ವಾಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತ, ವಿಜಯಪುರದಲ್ಲಿ ಘಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.