ಬಂಟ್ವಾಳ(ದ.ಕ): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಸಂಘಟನೆ ವತಿಯಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನವಿಲ್ಲದೇ ಉಚಿತ ಆರೋಗ್ಯ ಸೇವೆ ನೀಡಿದರು. ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಸೇವೆ ಮುಂದುವರೆಸಿದರು.
ಬೇಡಿಕೆ ಈಡೇರಿಸುವಂತೆ ಎಲ್ಲ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ, ಸರ್ಕಾರದ ಗಮನ ಸೆಳೆದರು.