ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿರುವ ಹೋಟೆಲ್ವೊಂದರ ತ್ಯಾಜ್ಯವನ್ನು ರಸ್ತೆ ಬದಿ ಎಸೆದ ಹಿನ್ನೆಲೆಯಲ್ಲಿ ಹೋಟೆಲ್ಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಇಲ್ಲಿನ ಟಾಪ್ ಇನ್ ಟೌನ್ ಹೋಟೆಲ್ ಸಿಬ್ಬಂದಿ ಕಸವನ್ನ ರಸ್ತೆ ಬದಿ ಎಸೆಯುವಾಗ ಸಿಕ್ಕಿಬಿದ್ದಿದ್ದರು.
ಅಡ್ಯಾರ್ ಗ್ರಾಮ ಪಂಚಾಯತ್ನ ಅಧ್ಯಕ್ಷರು, ಪಿಡಿಒ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಹೋಟೆಲ್ ಬಳಿ ಬಂದು ಕೇಳಿದಾಗ ಇದು ನಮ್ಮ ಹೋಟೆಲ್ನ ತ್ಯಾಜ್ಯ ಅಲ್ಲ ಎಂದು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದರು.
ಬಳಿಕ ಕಸ ಪರಿಶೀಲಿಸಿದಾಗ ಅದರಲ್ಲಿ ಹೋಟೆಲ್ ರಶೀದಿಗಳು ಸಿಕ್ಕಿದ್ದು, ಗ್ರಾಮ ಪಂಚಾಯಿತಿ ಕಡೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಇದನ್ನೂ ಓದಿ: ನಾಳೆ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಇರುವುದಿಲ್ಲ, ಕಾರಣ?