ಉಳ್ಳಾಲ: ಜೋರು ಮಳೆಗೆ ಹೋಟೆಲ್ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಒಳಗಿದ್ದ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ಉಳ್ಳಾಲದ ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ನಡೆದಿದೆ.
ಕುತ್ತಾರಿನಲ್ಲಿರುವ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಎಂದಿನಂತೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಮಳೆಗೆ ಏಕಾಏಕಿ ಹಂಚಿನ ಮೇಲ್ಛಾವಣಿ ಕುಸಿದು ಬಿದ್ದಿದೆ. ಒಳಗಿದ್ದ ಕಾರ್ಮಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಬಾರ್ನ ಸಿಸಿ ಕ್ಯಾಮೆರಾದಲ್ಲಿ ಘಟನೆಯ ವಿಡಿಯೋ ಸೆರೆಯಾಗಿದ್ದು, ವಿಡಿಯೋ ಸದ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.