ETV Bharat / state

ಹರೇಕಳ : ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆ ಸಂಪೂರ್ಣ ಭಸ್ಮ - ETV Bharat kannada News

ಮನೆಗೆ ಬೆಂಕಿ ಬಿದ್ದು ಸಂಪೂರ್ಣ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ.

Fire accident
ಬೆಂಕಿ ಅವಘಡ
author img

By

Published : Apr 2, 2023, 11:01 PM IST

ಉಳ್ಳಾಲ (ದಕ್ಷಿಣ ಕನ್ನಡ) : ಹರೇಕಳ ಗ್ರಾಮದಲ್ಲಿ ಇಂದು ಸಂಜೆ 6.50ರ ವೇಳೆ ಮನೆಯೊಂದರ ಅಡುಗೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದೆ. ಪರಿಣಾಮ ಘಟನೆಯಲ್ಲಿ ಸಂಪೂರ್ಣ ಮನೆ ಸುಟ್ಟು ಕರಕಳಲಾಗಿದ್ದು, ಈ ವೇಳೆ ಯಾವುದೇ ಪ್ರಾಣಿ ಹಾನಿ ಸಂಭವಿಸಿಲ್ಲ.

ದೇರಿಕಟ್ಟೆ ನಿವಾಸಿಯಾದ ನೇಬಿಸ ಎಂಬುವರಿಗೆ ಸೇರಿದ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ರಂಜಾನ್ ಉಪವಾಸದ ಪ್ರಯುಕ್ತ ಇಫ್ತಾರ್​ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಆದರೆ ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹೋಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮವಾಗಿವೆ.

ಇದನ್ನೂ ಓದಿ : ಹೈ ಟೆನ್ಷನ್​ ವಿದ್ಯುತ್ ತಂತಿ ಬಿದ್ದು ಹೊತ್ತಿ ಉರಿದ ಕಾರ್ಖಾನೆ.. ನೆಲಮಂಗಲದಲ್ಲಿ ಅವಘಡ

ಬಳಿಕ ಬೆಂಕಿ ಹೆಚ್ಚಿ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕದಳದ ಧಾವಿಸಿ, ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇನ್ನು ಇದೇ ಸಂದರ್ಭದಲ್ಲಿ ಬೆಂಕಿ ಅವಘಡದ ಸುದ್ದಿಯ ಮಾಹಿತಿ ಪಡೆದು ಶಾಸಕ ಯು ಟಿ ಖಾದರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅದೇ ವೇಳೆ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳಾದ ರೆಹನ ನಝೀರ್, ಅನೀಸ್, ಹನೀಫ್, ರೆಹನ ಮುಹಮ್ಮದ್, ಅಬ್ದುಲ್ ಬಶೀರ್ ಎಸ್​ಎಂ ಮತ್ತಿತರು ಸ್ಥಳಕ್ಕೆ ಭೇಟಿ ನೀಡಿ ಮನೆಯವರಿಗೆ ಧೈರ್ಯ ಹೇಳಿದರು.

ಇದನ್ನೂ ಓದಿ : ಗ್ಯಾಸ್​ ಸೋರಿಕೆಯಿಂದ ಶೆಡ್​ನಲ್ಲಿ ಬೆಂಕಿ: ಇಂದು ಮತ್ತಿಬ್ಬರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.