ETV Bharat / state

ಒಕ್ಕಲಿಗ ಕಾರ್ಯಕ್ರಮದಲ್ಲಿ ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನವನ್ನೇ ಕಳೆದುಕೊಂಡೆ: ಸದಾನಂದಗೌಡ

ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ತಾವು ಆಡಿದ್ದ ಮಾತಿನಿಂದ ಮುಖ್ಯಮಂತ್ರಿ ಸ್ಥಾನವನ್ನೇ ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಬಹಿರಂಗಪಡಿಸಿದ್ದಾರೆ.

i-lost-cm-position-after-my-speech-in-okkaliga-program-sadananda-gowda
ಒಕ್ಕಲಿಗ ಕಾರ್ಯಕ್ರಮದಲ್ಲಿ ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನವನ್ನೇ ಕಳೆದುಕೊಂಡೆ: ಸದಾನಂದಗೌಡ
author img

By ETV Bharat Karnataka Team

Published : Dec 27, 2023, 10:45 AM IST

ಕಡಬ (ದಕ್ಷಿಣ ಕನ್ನಡ): ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವುದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ನೆನಪಿಸಿಕೊಂಡಿದ್ದಾರೆ. ಕಡಬದ ಹೊಸ್ಮಠ ಎಂಬಲ್ಲಿ ಮಂಗಳವಾರ ನಡೆದ ಒಕ್ಕಲಿಗ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ತೋಡಿಕೊಂಡರು.

'ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ದೊಡ್ಡ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ, ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯಮಂತ್ರಿಯಾದೆ ಎಂದು ಹೇಳಿಕೆ ನೀಡಿದ್ದೇ. ಇದು ನನ್ನ ಮುಖ್ಯಮಂತ್ರಿ ಸ್ಥಾನಕ್ಕೇ ಮುಳುವಾಯಿತು. ಹಿರಿಯರು ನನಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯಪ್ಪಾ ಎಂದು ಹೇಳಿದರು' ಎಂದು ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೇಸರ ಹೊರಹಾಕಿದರು.

'ನಾನು ಚುನಾವಣೆ ರಾಜಕೀಯದಿಂದಲೂ ನಿವೃತ್ತಿಯಾಗುತ್ತಿದ್ದೇನೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಇಂದು ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆಯೇ ಇಲ್ಲ. ಹರಕು ನಾಲಿಗೆ, ಚೀಲದ ತುಂಬಾ ದುಡ್ಡು ಹಾಗೂ ಗುಂಪುಗಾರಿಕೆಯಿಂದಲೇ ಪ್ರಸ್ತುತ ರಾಜಕೀಯ ನಡೆಯುತ್ತಿದೆ. ಆದರೆ, ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಬಿಜೆಪಿ ಜೊತೆಗೆ ಕೆಲಸ ಮಾಡುತ್ತೇನೆ' ಎಂದು ಸದಾನಂದಗೌಡ ತಿಳಿಸಿದರು.

ಸಿದ್ದರಾಮಯ್ಯ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದ ಅಶ್ವತ್ಥನಾರಾಯಣ: ಇದೇ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರವು ಸದುದ್ದೇಶದಿಂದ ಕೂಡಿಲ್ಲ. ಮಕ್ಕಳನ್ನು ಧರ್ಮಾಧಾರಿತವಾಗಿ ವಿಭಜಿಸುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ರಾಜ್ಯದ ಜನರ ಭಾವನೆಯ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಎಂದು ಆರೋಪಿಸಿದರು.

ಮಕ್ಕಳಲ್ಲಿ ವ್ಯತ್ಯಾಸಗಳು ಇರಬಾರದು. ಶಾಲೆಗೆ ಬರುವ ಎಲ್ಲ ಮಕ್ಕಳು ಒಂದಾಗಿರಬೇಕು. ಒಂದು ಧರ್ಮಾಧಾರಿತವಾಗಿ ಇರಬಾರದು ಎಂದು ಸಮವಸ್ತ್ರ ನಿಯಮ ತರಲಾಗಿತ್ತು. ಅದರ ಆಧಾರದಲ್ಲಿ ಸರ್ಕಾರ ಅಂದು ಕ್ರಮ ಕೈಗೊಂಡಿದೆ. ಈಗಾಗಲೇ ಹೈಕೋರ್ಟ್ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್‌ನಲ್ಲೂ ತೀರ್ಪು ಕೊಡುವುದು ಮಾತ್ರ ಬಾಕಿ ಇದೆ. ಇದರ ಮಧ್ಯದಲ್ಲಿ ರಾಜಕೀಯ ಪ್ರೇರಿತವಾಗಿ ಸಿದ್ದರಾಮಯ್ಯ ಅವರು ಗೊಂದಲವನ್ನು ನಿರ್ಮಾಣ ಮಾಡುವ ಹೇಳಿಕೆ ನೀಡಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಅದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರ ನಿಲುವನ್ನು ವಿರೋಧಿಸಿ ಹೋರಾಟ ಮಾಡಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.

ಇದನ್ನೂ ಓದಿ: ಜಗತ್ತಿನಲ್ಲಿ ಲೂಟಿ, ದರೋಡೆ ಮಾಡೋರು ಇದ್ದರೆ ಅದು ರಾಜಕಾರಣಿಗಳು: ಶಾಸಕ ರಾಜು ಕಾಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.