ಬೆಳ್ತಂಗಡಿ : ಕಾಸರಗೋಡು ಎಡನೀರು ಮಠದ ನಿಯೋಜಿತ ಉತ್ತರಾಧಿಕಾರಿ ಯತಿ ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಸ್ವಾಮೀಜಿಯವರನ್ನು ಸಕಲ ಗೌರವಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಸ್ವಾಮೀಜಿಗಳು ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ವೇಳೆ ಕ್ಷೇತ್ರದ ಪರ ಡಾ.ಹೆಗ್ಗಡೆಯವರು ಗೌರವಾರ್ಪಣೆ ಸಲ್ಲಿಸಿದರು. ಧರ್ಮಾಧಿಕಾರಿಗಳ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಪಾರುಪತ್ಯೇದಾರ ಲಕ್ಷ್ಮಿ ನಾರಾಯಣ ರಾವ್, ಸೀತಾ ರಾಮ ತೋಳ್ಪಡಿತ್ತಾಯ ಸ್ವಾಗತಿಸಿದರು.
ಈ ವೇಳೆ ಕುಂಟಾರು ರವೀಶ್ ತಂತ್ರಿ ಗೋಕುಲ ಅಡಿಗ, ರಾಜೇಂದ್ರ ಕಲ್ಲೂರಾಯ, ಉಜಿರೆ ಅಶೋಕ ಭಟ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉಜಿರೆಯ ಅರಿಪ್ಪಾಡಿ ಮಠಕ್ಕೆ ಭೇಟಿ ನೀಡಿ ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದರು. ಬಾಲಕೃಷ್ಣ ಅರಿಪ್ಪಾಡಿತ್ತಾಯರು ಅವರನ್ನು ಭಕ್ತಿಪೂರ್ವಕ ಸ್ವಾಗತಿಸಿ ಗೌರವಿಸಿದರು.