ಮಂಗಳೂರು: ಕಾಂಗ್ರೆಸ್ ಪಕ್ಷ ಘೋಷಿಸಿರುವ ಐದು ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಜಾರಿ ಮಾಡಲು ಸಾಧ್ಯವಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಾಗುವುದು ಎಂದು ವಿಪಕ್ಷ ಉಪನಾಯಕ, ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು ಟಿ ಖಾದರ್ ಹೇಳಿದ್ದಾರೆ.
ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಯನ್ನು ಘೋಷಿಸಿದೆ. 200 ಯುನಿಟ್ ವಿದ್ಯುತ್ ಉಚಿತ, ಮನೆಯೊಡತಿಗೆ 2000 ರೂ., ನಿರುದ್ಯೋಗಿಗಳಿಗೆ ಮಾಸಾಶನ, ಬಿಪಿಎಲ್ ಕಾರ್ಡ್ ಇರುವವರಿಗೆ 10 ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿಯನ್ನು ಘೋಷಣೆ ಮಾಡಿದೆ.
ಈ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಜಾರಿ ಮಾಡಲಾಗುವುದು. ಒಂದು ವೇಳೆ ಈ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ವಿಫಲವಾದರೆ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್, ಬೆಲೆ ಏರಿಕೆಯ ಆತಂಕವಾದ ಇದೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ