ಬಂಟ್ವಾಳ (ದ.ಕ.): ಕೊರೊನಾ ಲಾಕ್ಡೌನ್ ನಡುವೆಯೂ ಬಂಟ್ವಾಳ ಹಾಗೂ ವಿಟ್ಲದಲ್ಲಿ ಅಕ್ರಮ ಗೋಸಾಗಣೆ ಮಾಡುತ್ತಿದ್ದ ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಆಗಾಗ್ಗೆ ಗೋ ಅಕ್ರಮ ಸಾಗಣೆ ಕುರಿತು ಸುದ್ದಿಯಲ್ಲಿರುವ ಬಂಟ್ವಾಳ, ವಿಟ್ಲ ಪರಿಸರದ ಗೋಸಾಗಣೆಗಾರರಿಗೆ ಲಾಕ್ ಡೌನ್ ಕೂಡ ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರಗೆ ದಾಳಿಗಿಳಿದ ಎಸ್ಐ ವಿನೋದ್ ರೆಡ್ಡಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ವಾಹನ ಮತ್ತು ಮೂರು ಹಸುಗಳನ್ನು ವಶಕ್ಕೆ ತೆಗೆದುಕೊಂಡರು. ಈ ಸಂದರ್ಭ ವಾಹನದಲ್ಲಿದ್ದ ಮೂವರು ಪರಾರಿಯಾಗಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಅಳಿಕೆಯಿಂದ ಕಳವು ಮಾಡಿ ಒಕ್ಕೆತ್ತೂರಿನಿಂದ ಕೋಡಪದವು ರಸ್ತೆ ಮೂಲಕ ಸಾಲೆತ್ತೂರು ಕಡೆಗೆ ಬೆಳಗ್ಗಿನ ಜಾವ ಪಿಕಪ್ ವಾಹನದಲ್ಲಿ ಒಂದು ಹಸು ಮತ್ತು ಎರಡು ಕರುಗಳನ್ನು ಕೊಂಡೊಯ್ಯುತ್ತಿದ್ದಾಗ ದನಗಳ್ಳರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.