ಮಂಗಳೂರು : ಒಳ ಉಡುಪಿನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹಮದ್ ಕಲ್ಲಾರ್ ಬಂಧಿತ ಆರೋಪಿ. ಈತ ಇಂದು ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಓದಿ : 2 ಕೋಟಿ ಮೌಲ್ಯದ ಡ್ರಗ್ಸ್ ವಶ.. ತಂದೆ-ಮಗನನ್ನು ವಶಕ್ಕೆ ಪಡೆದ ಎನ್ಸಿಬಿ
ಈತ ತನ್ನ ಒಳ ಉಡುಪಿನಲ್ಲಿ ಪೌಡರ್ ರೂಪದಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. 57,14,940 ರೂ. ಮೌಲ್ಯದ 1.23 ಕೆಜಿ ಚಿನ್ನ ಮತ್ತು ಈತ ಧರಿಸಿದ್ದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.