ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5.84 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿ ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ.
ಬಂಧಿತರು ಕಾಸ್ಮೆಟಿಕ್ ವಸ್ತುಗಳನ್ನು ಸಹ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. 120.38 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಅಲ್ಲದೆ 1.71 ಲಕ್ಷ ಮೌಲ್ಯದ ಕಾಸ್ಮೆಟಿಕ್ ವಸ್ತುಗಳನ್ನು ಕೂಡ ಜಪ್ತಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ.