ಸುಳ್ಯ : ಬೈಕ್ ಸ್ಕಿಡ್ ಆಗಿ ಬಿದ್ದ ಸಮಯದಲ್ಲಿ ರಕ್ಷಣೆಗೆ ಬಂದ ಸ್ಥಳೀಯರು ಪರಿಶೀಲನೆ ನಡೆಸಿದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯದ ಪ್ಯಾಕೇಟ್ಗಳು ಪತ್ತೆಯಾಗಿರುವ ಘಟನೆ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ.
ಬೈಕ್ ಸವಾರ ಬಾಕ್ಸ್ ಮತ್ತು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಮದ್ಯ ಸಾಗಿಸುತ್ತಿದ್ದ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಸುಳ್ಯ ಅಬಕಾರಿ ಪೊಲೀಸರು ಬೈಕ್ ಮತ್ತು 13.300 ಲೀಟರ್ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಲೋಕನಾಥ್ ರೈ ಎಂಬಾತ ಪರಾರಿಯಾಗಿದ್ದು, ವ್ಯಕ್ತಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ಗೆ ಸಾರ್ವಜನಿಕರು ದೂರು ನೀಡಿದ್ದರು ಎನ್ನಲಾಗಿದೆ.