ETV Bharat / state

ಬಂಟ್ವಾಳ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ - Bantwal latest News

ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

Bantwal
ನಾಸೀರ್
author img

By

Published : Apr 8, 2021, 7:24 AM IST

ಬಂಟ್ವಾಳ: ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕೊಡುಂಗಾಯಿ ಎಂಬಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೆ.ಜಿ.ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿರುವ ವಿಟ್ಲ ಪೊಲೀಸರು ನಾಸೀರ್ ಎಂಬಾತನನ್ನು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಾಫ ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಕೊರಗಜ್ಜ ಗುಡಿ ಅಪವಿತ್ರ: ಸಾಕ್ಷ್ಯಾಧಾರದ ಕೊರತೆಗೆ ಶಂಕಿತರನ್ನು ಬಂಧಿಸದ ಪೊಲೀಸರು

ರಾತ್ರಿ 7.30ರ ಸಮಯದಲ್ಲಿ ವಿಟ್ಲ ಪಡೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ 2 ಕೆಜಿ ತೂಕದ 20 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ಮಾರುತಿ ಆಲ್ಟೋ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು 2 ಲಕ್ಷ ರೂ. ಮೌಲ್ಯದ ಕಾರು, ಗಾಂಜಾ ವಶಕ್ಕೆ ಪಡೆದರು.

ಆರೋಪಿಯನ್ನು ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.