ETV Bharat / state

ಬಂಟ್ವಾಳದಲ್ಲಿ ಅಕ್ರಮ ಮರಳುಗಾರಿಕೆ: ಓರ್ವನ ಬಂಧಿನ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಲಾಕ್​​ಡೌನ್ ನಡುವೆಯೂ ಅಕ್ರಮ ಮರಳು ದಂಧೆ ನಡೆಯುತ್ತಿರುವುದನ್ನು ಪತ್ತೆ ಹಚ್ಚಿದ ಬಂಟ್ವಾಳ ಪೊಲೀಸರು, ಓರ್ವನನ್ನು ಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Illegal sandbagging in Bantwal
ಬಂಟ್ವಾಳದಲ್ಲಿ ಅಕ್ರಮ ಮರಳುಗಾರಿಕೆ: ಓರ್ವನನ್ನು ಬಂಧಿನ
author img

By

Published : Apr 16, 2020, 11:08 PM IST

ಬಂಟ್ವಾಳ(ದ.ಕ): ಧ್ವನಿವರ್ಧಕದ ಮೂಲಕ ಒಂದು ಕಡೆ ಮನೆಯಲ್ಲೇ ಇರಿ ಎಂಬ ಘೋಷಣೆಯನ್ನು ಕೂಗುತ್ತಾ ಪೊಲೀಸರು ಸಾಗಿದರೆ, ಇನ್ನೊಂದೆಡೆ ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಪ್ರಕರಣವನ್ನು ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಈ ಸಂಬಂಧ ಓರ್ವನನ್ನು ಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಟ್ವಾಳ ತಾಲೂಕಿನ ಕರಿಯಂಗಳ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಗೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಪ್ರೊಬೇಷನರಿ ಐಪಿಎಸ್ ಅಧಿಕಾರಿ ರಂಜಿತ್ ಇಂದು ಮಧ್ಯಾಹ್ನ ದಾಳಿ ನಡೆಸಿದ್ದಾರೆ.

ಈ ಸಂದರ್ಭ ಸ್ಥಳದಲ್ಲಿ 10 ಲೋಡ್ ಮರಳು, ಮರಳು ತುಂಬಿಸಲು ಉಪಯೋಗಿಸುತ್ತಿದ್ಧ 1 ಹಿಟಾಚಿ, 3 ಬೋಟ್​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.