ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆಗಳ ಮಾರಾಟ ವಿಚಾರದಲ್ಲಿ ಅವ್ಯವಹಾರ ನಡೆದಿರುವುದಾಗಿ ಕಾರ್ಯನಿರ್ವಹಣಾ ಅಧಿಕಾರಿ ಮೇಲೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕಂಡು ಬಂದಲ್ಲಿ ಕಾರ್ಯನಿರ್ವಹಣಾಧಿಕಾರಿಯನ್ನು ಅಮಾನತು ಮಾಡಿ, ಪಾರದರ್ಶಕ ತನಿಖೆ ಮಾಡುವಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಗೆ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.
ಈ ಮಧ್ಯೆ ದೇವಳದ ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ನೂತನ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಅವರನ್ನು ನೇಮಕ ಮಾಡುವಂತೆ ಸಚಿವರು ಆದೇಶಿಸಿದ್ದಾರೆ. ಅಲ್ಲದೆ ಮುಂದಿನ ಕ್ರಮ ಜರುಗಿಸಲಾಗುವುದೆಂದು ಆಯುಕ್ತರ ಕಚೇರಿಯ ಮೂಲಗಳು ತಿಳಿಸಿದೆ.