ETV Bharat / state

ಅಕ್ರಮ ಆಸ್ತಿ ಗಳಿಕೆ : ಮನಪಾ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಗೆ 5 ವರ್ಷ ಸಜೆ, 34 ಲಕ್ಷ ರೂ. ದಂಡ

ನ್ಯಾಯಾಧೀಶ ಬಿ.ಬಿ. ಜಕಾತಿಯವರು ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗು ಆಗಿದ್ದು, ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ ಮತ್ತು ಕಳೆದ ಹದಿನಾಲ್ಕು ವರ್ಷಗಳಿಂದ 17,00,000 ರೂ. ಅಕ್ರಮ ಆಸ್ತಿ ಹೊಂದಿರುವ ಅಪರಾಧಿ ಬಿ ಪಿ ಶಿವರಾಜುಗೆ ಎರಡುಪಟ್ಟು ದಂಡ ವಿಧಿಸುವುದು ಸೂಕ್ತ ಎಂದು ರೂ. 34,00,000 ರೂ. ದಂಡ ಪಾವತಿಸಲು ಆದೇಶಿಸಿದ್ದಾರೆ..

ಟೌನ್ ಪ್ಲಾನಿಂಗ್ ಆಫೀಸರ್ ಗೆ 5 ವರ್ಷ ಸಜೆ, 34 ಲಕ್ಷ ರೂ. ದಂಡ

author img

By

Published : Jul 26, 2021, 8:28 PM IST

ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಲ್ಲಿ 2007ರಲ್ಲಿ ದಾಳಿಗೊಳಗಾಗಿರುವ ಮಂಗಳೂರು ಮನಪಾ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ ಪಿ ಶಿವರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ 5 ವರ್ಷ ಶಿಕ್ಷೆ ಮತ್ತು 34 ಲಕ್ಷ ರೂ. ದಂಡ ವಿಧಿಸಿ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮನಪಾ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ ಪಿ ಶಿವರಾಜುರವರು ತಮ್ಮ ಸೇವಾವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪ್ರಸನ್ನ ವಿ. ರಾಜು ಮಾಹಿತಿ ಕಲೆ ಹಾಕಿದ್ದರು. ಈ ಹಿನ್ನೆಲೆ ಆಗಿನ ಲೋಕಾಯುಕ್ತ ಉಪಾಧೀಕ್ಷಕರು ಮತ್ತು ಅವರ ತಂಡ ಕೇಸ್ ದಾಖಲಿಸಿ 2007ರ ಜುಲೈ 25ರಂದು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ಮಾಹಿತಿಗಳನ್ನು ಕಲೆ ಹಾಕಿದಾಗ ಆದಾಯಕ್ಕಿಂತ ಸುಮಾರು 38 ಲಕ್ಷ ರೂ.ನಷ್ಟು ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿವೈಎಸ್‌ಪಿ ಆಗಿದ್ದ ಡಾ. ಪ್ರಭುದೇವ್ ಮಾಣೆ ಅವರು ಆರೋಪಿ ಶಿವರಾಜು ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನೆಯ ಪರವಾಗಿ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ ಎಸ್‌ ಎನ್ ರಾಜೇಶ್‌ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿತ್ತು.

ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದವರೆಗೆ ಆರೋಪಿ ಶಿವರಾಜು 17 ಲಕ್ಷ ರೂ.ನಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದರು ಎಂದು ಮಾನ್ಯ ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ ಬಿ ಜಕಾತಿಯವರು ಅಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು 34,00,000 ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ : 4ನೇ ಬಾರಿಗೆ ಹೃದಯಬಡಿತ ನಿಲ್ಲಿಸದೆ ತೆರೆದ ಹಾರ್ಟ್ ಬೈಪಾಸ್ ಸರ್ಜರಿ: ಮಂಗಳೂರಿನಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ

ಆರೋಪಿಯು ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದನು. ವಿಶೇಷ ಸರಕಾರಿ ಅಭಿಯೋಜಕ ಕೆಎಸ್‌ಎನ್ ರಾಜೇಶ್ ಪ್ರಬಲ ವಾದ ಮಂಡಿಸಿ ಭ್ರಷ್ಟಾಚಾರ ಪ್ರಕರವಾದ್ದರಿಂದ ಗರಿಷ್ಟ ಶಿಕ್ಷೆ ವಿಧಿಸಬೇಕೆಂದು ನ್ಯಾಯಾಲಯವನ್ನು ಕೋರಿದರು.

ನ್ಯಾಯಾಧೀಶ ಬಿ.ಬಿ. ಜಕಾತಿಯವರು ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗು ಆಗಿದ್ದು, ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ ಮತ್ತು ಕಳೆದ ಹದಿನಾಲ್ಕು ವರ್ಷಗಳಿಂದ 17,00,000 ರೂ. ಅಕ್ರಮ ಆಸ್ತಿ ಹೊಂದಿರುವ ಅಪರಾಧಿ ಬಿ ಪಿ ಶಿವರಾಜುಗೆ ಎರಡುಪಟ್ಟು ದಂಡ ವಿಧಿಸುವುದು ಸೂಕ್ತ ಎಂದು ರೂ. 34,00,000 ರೂ. ದಂಡ ಪಾವತಿಸಲು ಆದೇಶಿಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.