ಮಂಗಳೂರು: ಸುರತ್ಕಲ್ ಪಚ್ಚನಾಡಿ ವಾರ್ಡಿನ ಹಾಲ್ ತೋಟ ರಸ್ತೆ ಕಾಂಕ್ರೀಟಿಕರಣಗೊಂಡ ಕಾಮಗಾರಿಯನ್ನು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು.
ಒಟ್ಟು 30 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಿಸಲಾಗಿದೆ. ಕೆಲವು ವರ್ಷದ ಬಳಿಕ ಸ್ಥಳೀಯ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಗೀತ ಆರ್ ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೋಂದೆಲ್ ಹಾಜರಿದ್ದರು.