ಬೆಳ್ತಂಗಡಿ, ದಕ್ಷಿಣಕನ್ನಡ: ಖಾಸಗಿ ಕಾಲೇಜೊಂದರ ಆವರಣದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕಾಲೇಜು ಆಡಳಿತ ಮಂಡಳಿ ಈ ಇಬ್ಬರೂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ. ಈ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಡಿಸೆಂಬರ್ 17 ರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ನಂತರ ಸ್ಥಳೀಯ ಕಾಲೇಜಿನ ಯುವಕ ಮತ್ತು ಯುವತಿ ಸಾರ್ವಜನಿಕವಾಗಿ ಅಶ್ಲೀಲವಾಗಿ ವರ್ತಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳಾಗಿ ಆಕ್ರೋಶ ವ್ಯಕ್ತವಾಗಿತ್ತು. ನಂತರ ಕಾಲೇಜು ಆಡಳಿತ ಮಂಡಳಿಗೆ ವಿಚಾರ ತಿಳಿದು ಇಬ್ಬರು ವಿದ್ಯಾರ್ಥಿಗಳನ್ನು ಅಶಿಸ್ತಿನ ವರ್ತನೆಗಾಗಿ ಅಮಾನತು ಮಾಡಿದೆ ಎಂದು ತಿಳಿದು ಬಂದಿದೆ.