ಸುಳ್ಯ: ಸುಳ್ಯ, ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಧ್ವಜಾರೋಹಣ, ಸರಳ ಸಭಾ ಕಾರ್ಯಕ್ರಮ, ಕೊರೊನಾ ವಾರಿಯರ್ಸ್‌ಗಳಿಗೆ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು.
ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಸಲಾಯಿತು. ಕಡಬ ತಾಲೂಕು ಕಚೇರಿಯ ಆವರಣದಲ್ಲಿ ಸಹ ಧ್ವಜಾರೋಹಣ ನೆರವೇರಿಸಲಾಯಿತು.
ತಹಶೀಲ್ದಾರ್ ಅನಂತಶಂಕರ್ ಸುಳ್ಯದಲ್ಲಿ ಮತ್ತು ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಡಬದಲ್ಲಿ ಧ್ವಜಾರೋಹಣ ಮಾಡಿದರು.
ಇದೇ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.