ಬಂಟ್ವಾಳ: ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವ ಕುರಿತು ಬಂಟ್ವಾಳ ತಾ.ಪಂ. ಸಭಾಂಗಣದಲ್ಲಿ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ನೇತೃತ್ವದಲ್ಲಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ವತಿಯಿಂದ ಬಂಟ್ವಾಳ ತಾಲೂಕ್ ಪಂಚಾಯತ್ ನ ಎಲ್ಲಾ ಗ್ರಾ.ಪಂ. ಸಿಬ್ಬಂದಿ ಮತ್ತು ಜನಪ್ರತಿನಿಧಿಗಳಿಗೆ ಕೋವಿಡ್ 19 ರೋಗ ನಿರೋಧಕ ಹೋಮಿಯೋಪತಿ ಮಾತ್ರೆಗಳನ್ನು ವಿತರಿಸಲಾಯಿತು.
ಈ ವೇಳೆ ಆಯುಷ್ ವೈದ್ಯಾಧಿಕಾರಿ ಡಾ.ಮಣಿಕರ್ಣಿಕ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕಾರ್ಯ ಪಾಲಕ ಅಭಿಯಂತರರಾದ ನರೇಂದ್ರ ಬಾಬು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.