ETV Bharat / state

ಆದಿತ್ಯ ರಾವ್​ ನಂತೆ ಪ್ರಸಿದ್ಧಿಯಾಗಲು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಕರೆ ಮಾಡಿದ್ದ ಆರೋಪಿ! - Udupi Vasanth krishna sherigar

ಕಳೆದ ಬಾರಿ ವಿಮಾನ ನಿಲ್ದಾಣಕ್ಕೆ ಸ್ಪೋಟಕ ಇರಿಸಿ ಆದಿತ್ಯ ರಾವ್ ಪ್ರಸಿದ್ಧನಾಗಿದ್ದರಿಂದ ಪ್ರೇರಿತನಾಗಿ ತಾನೂ ಪ್ರಸಿದ್ಧನಾಗಬೇಕೆಂದು ಆರೋಪಿ ಹುಸಿ ಬಾಂಬ್ ಕರೆ ಮಾಡಿರುವುದಾಗಿ ತನಿಖೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹೇಳಿದ್ದಾರೆ.

Vikas kumar
ವಿಕಾಸ್ ಕುಮಾರ್
author img

By

Published : Aug 21, 2020, 3:46 PM IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಅವರ ಮೊಬೈಲ್ ಗೆ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿರುವುದಾಗಿ ಹುಸಿ ಸಂದೇಶ ಕಳಿಸಿ ಸಿಕ್ಕಿಬಿದ್ದಿರುವ ಆರೋಪಿ ತಾನು ಪ್ರಸಿದ್ಧಿಯಾಗಲು ಈ ರೀತಿ ಮಾಡಿದ್ದ ಎಂದು ತಿಳಿದುಬಂದಿದೆ.

ಈತ ಕಳೆದ ಬಾರಿ ವಿಮಾನ ನಿಲ್ದಾಣಕ್ಕೆ ಸ್ಪೋಟಕ ಇರಿಸಿ ಆದಿತ್ಯ ರಾವ್ ಪ್ರಸಿದ್ಧನಾಗಿದ್ದರಿಂದ ಪ್ರೇರಿತನಾಗಿ ತಾನೂ ಪ್ರಸಿದ್ಧನಾಗಬೇಕೆಂದು ಹೀಗೆ ಮಾಡಿರುವುದಾಗಿ ತನಿಖೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹೇಳಿದ್ದಾರೆ.

ಪ್ರಸಿದ್ಧನಾಗಬೇಕೆಂದು ಆರೋಪಿಯಿಂದ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ: ವಿಕಾಸ್ ಕುಮಾರ್

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ಅವರು, ಇದೊಂದು ಗಂಭೀರ ಪ್ರಕರಣ ಆಗಿರುವುದರಿಂದ ಅತನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ‌. ಆತನ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ‌ಈಗಾಗಲೇ ಆತನ ಕೊರೊನಾ ತಪಾಸಣೆಯನ್ನು ಮಾಡಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆ ಮುಂದುವರಿಯುತ್ತಿದೆ‌ ಎಂದು ಹೇಳಿದರು.

ಆ.19 ರಂದು ಮಧ್ಯಾಹ್ನ 1.05 ನಿಮಿಷಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಅವರ ಮೊಬೈಲ್ ಫೋನ್ ಗೆ ವಿಮಾನ ನಿಲ್ದಾಣಕ್ಕೆ ಬಾಂಬ್ ಇದೆ ಎಂಬ ಅನಾಮಧೇಯ ಕರೆಯೊಂದು ಬಂದಿದೆ. ಅವರು ತಕ್ಷಣ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಪೊಲೀಸ್ ದೂರು ನೀಡಿ ತಕ್ಷಣ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂಬುವುದಾಗಿ ತಿಳಿದು ಬಂದಿದೆ. ಬಳಿಕ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ತಕ್ಷಣ ಬೆದರಿಕೆ ಕರೆ ಬಂದಿರುವ ಮೊಬೈಲ್ ಸಂಖ್ಯೆಯ ಜಾಡು ಹಿಡಿದು ತನಿಖೆ ನಡೆಸಿದ್ದು, ವಿಳಾಸ ಉಡುಪಿ ಜಿಲ್ಲೆಯ ವ್ಯಾಪ್ತಿಗೆ ಬರುವುದರಿಂದ ಉಡುಪಿ ಪೊಲೀಸರ ಸಹಾಯದಿಂದ ಅಂದೇ ಆರೋಪಿಯನ್ನು ದಸ್ತಗಿರಿ ಮಾಡಿದ್ದೇವೆ‌. ಆರೋಪಿಯ ಹೆಸರು ವಸಂತ ಕೃಷ್ಣ ಶೇರಿಗಾರ್(33) ಆಗಿದ್ದು, ಕಾರ್ಕಳ ತಾಲೂಕಿನ ಮುದ್ರಾಡಿ ಗ್ರಾಮದ ನಿವಾಸಿಯಾಗಿದ್ದಾನೆ. 8ನೇ ತರಗತಿ ವ್ಯಾಸಂಗ ಮಾಡಿರುವ ಈತ ಮೊಬೈಲ್ ಅನ್ನು ಅತಿಯಾಗಿ ಬಳಕೆ ಮಾಡುತ್ತಿದ್ದ ಎಂದು ತನಿಖೆಯಿಂದ ನಮಗೆ ತಿಳಿದು ಬಂದಿದೆ ಎಂದು ಹೇಳಿದರು.

ಈ ಹಿಂದೆ ಬೆಂಗಳೂರಿನಲ್ಲಿ ಹೊಟೇಲ್ ಉದ್ಯೋಗದಲ್ಲಿದ್ದ ಆರೋಪಿ ಪ್ರಸ್ತುತ ಉಡುಪಿಯ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಲಾಕ್ ಡೌನ್ ಇದ್ದುದರಿಂದ ಮನೆಯಲ್ಲಿಯೇ ಗದ್ದೆ ಕೆಲಸ ಮಾಡುತ್ತಿದ್ದ. ಈತನಿಗೆ ಗೂಗಲ್ ಮೂಲಕ ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರ ದೂರವಾಣಿ ಸಂಖ್ಯೆ ಲಭ್ಯವಾಗಿದ್ದು, ತಾನು ಪ್ರಸಿದ್ಧನಾಗಬೇಕೆಂಬ ಬಯಕೆಯಿಂದ ಈ ಹುಸಿ ಬಾಂಬ್ ಕರೆ ಮಾಡಿದ್ದಾನೆ. ಈತನ ಮೇಲೆ ಈ ಹಿಂದೆ ಯಾವುದೇ ಅಪರಾಧ ಪ್ರಕರಣಗಳು ದಾಖಲಾಗಿಲ್ಲ.‌ ಈಗಷ್ಟೇ ತನಿಖೆ ಆರಂಭವಾಗಿದೆ. ತನಿಖೆ ಮುಂದುವರಿದಂತೆ ಏನಾದರೂ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೋ ಎಂಬ ಬಗ್ಗೆ ಮುಂದೆ ತಿಳಿದು ಬರಬಹುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.