ETV Bharat / state

ಅಡಿಕೆ ಬೇಡಿಕೆ ಕುಸಿಯಲು ಕೇಂದ್ರ ಸರ್ಕಾರ ಕಾರಣ: ಐವನ್ ಡಿಸೋಜ

ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬುದನ್ನು ಸ್ಪಷ್ಟಪಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಇಂದಿನವರೆಗೂ ಅಡಿಕೆ ಬೆಳೆಯ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟವಾದ ನೀತಿಯನ್ನು ಪ್ರಕಟ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.

ಐವನ್ ಡಿಸೋಜ
author img

By

Published : Oct 27, 2019, 2:59 AM IST

ಮಂಗಳೂರು: ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬುದನ್ನು ಸ್ಪಷ್ಟಪಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಇಂದಿನವರೆಗೂ ಅಡಿಕೆ ಬೆಳೆಯ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟವಾದ ನಿಲುವನ್ನು ಪ್ರಕಟ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ಬೇಕಾದಷ್ಟು ಅಡಿಕೆ ಉತ್ಪಾದನೆ ಮಾಡಿದರೂ, ಬೇಡಿಕೆ ಕುಸಿದಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಭಯವೇ ಇದಕ್ಕೆ ಕಾರಣ ಎಂದರು.

ಐವನ್ ಡಿಸೋಜ ಹೇಳಿಕೆ

ಅಡಿಕೆ ಬೆಳೆಗಾರರ ಪ್ರತ್ಯೇಕ ಮಂಡಳಿ ರಚನೆಯಾಗಬೇಕೆಂದು ರೈತರಿಂದ ಕೂಗು ಕೇಳಿ ಬರುತ್ತಿದೆ. ದೇಶದಲ್ಲಿ ಬೆಳೆಯುವ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಒಂದರಲ್ಲಿಯೇ 51 ಶೇಕಡಾ ಬೆಳೆಯಲಾಗುತ್ತದೆ. ಅಲ್ಲದೆ ಪ್ರಪಂಚದ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಭಾರತವೊಂದೇ 49 ಶೇಕಡಾ ಉತ್ಪಾದಿಸುತ್ತದೆ. ಆದ್ದರಿಂದ ನಮ್ಮ ದೇಶದ ಅಡಿಕೆಗೆ ಉತ್ತಮ ಬೇಡಿಕೆ ಇದೆ ಎಂದು ಐವನ್ ಡಿಸೋಜ ತಿಳಿಸಿದರು.

Intro:ಮಂಗಳೂರು: ಅಡಿಕೆಯನ್ನು ಕ್ಯಾನ್ಸರ್ ಕಾರಕ ಅಲ್ಲ ಎಂಬುದನ್ನು ಸ್ಪಷ್ಟಪಡಿಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಇಂದಿನವರೆಗೂ ಅಡಿಕೆ ಬೆಳೆಯ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟವಾದ ನೀತಿಯನ್ನು ಪ್ರಕಟ ಮಾಡಿಲ್ಲ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಆದ್ದರಿಂದ ರಾಜ್ಯದ ಶಾಸಕರು ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬುವುದನ್ನು‌ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿ. ಆದ್ದರಿಂದ ಭಾರತದಲ್ಲಿ ಬೇಕಾದಷ್ಟು ಅಡಿಕೆ ಉತ್ಪಾದನೆ ಮಾಡಿದರೂ, ಬೇಡಿಕೆ ಕುಸಿದಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಭಯವೇ ಇದಕ್ಕೆ ಕಾರಣ ಎಂದು ಅವರು ಕಿಡಿಕಾರಿದರು.

ಕರಾವಳಿಯ ಅತ್ಯಂತ ಪ್ರಮುಖ ಬೆಳೆ ಅಡಿಕೆ ಬೆಳೆಗಾರರಿಗೆ ಪ್ರತ್ಯೇಕ ಮಂಡಳಿ ರಚನೆಯಾಗಬೇಕೆಂದು ರೈತರಿಂದ ಕೂಗು ಕೇಳಿ ಬರುತ್ತಿದೆ. ದೇಶದಲ್ಲಿ ಬೆಳೆಯುವ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಒಂದರಲ್ಲಿಯೇ 51 ಶೇಕಡಾ ಬೆಳೆಸಲಾಗುತ್ತದೆ. ಅಲ್ಲದೆ ಪ್ರಪಂಚದ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಭಾರತವೊಂದೇ 49 ಶೇ ಉತ್ಪಾದಿಸುತ್ತದೆ. ಆದ್ದರಿಂದ ನಮ್ಮ ದೇಶದ ಅಡಿಕೆಗೆ ಉತ್ತಮ ಬೇಡಿಕೆ ಇದೆ ಎಂದು ಐವನ್ ಡಿಸೋಜ ಹೇಳಿದರು.

Body:ಈ ಬಾರಿ ವಿಪರೀತ ಮಳೆ ಬಂದು ಎಣ್ಣೆ ಬಿಡಲಾಗದೆ ಎಲ್ಲಾ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗಿವೆ. ನಾನು ವಿಧಾನಸಭೆಯಲ್ಲಿ ಅಡಿಕೆ ಮರಕ್ಕೆ ಹಳದಿ ರೋಗ ಬಂದಾಗ ಎಷ್ಟು ಪರಿಹಾರ ನೀಡಿದ್ದಾರೆ ಎಂದು ಕೇಳಿದ್ದೆ. ಪ್ರಕೃತಿ ವಿಕೋಪ ಆದಾಗ ಕಂದಾಯ ಇಲಾಖೆಯ ಪರಿಹಾರ ನಿಧಿಯಿಂದ ಎನ್ ಡಿಆರ್ ಎಫ್ ಹಾಗೂ ಎಸ್ ಡಿಆರ್ ಎಫ್ ಯೋಜನೆಯ ಮಾರ್ಗ ಸೂಚಿಯಂತೆ ಪರಿಹಾರ ಧನ ನೀಡಬಹುದು. ಆದರೆ ರೋಗದಿಂದ ಬೆಳೆ ನಾಶವಾದಲ್ಲಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಸರಕಾರ ಹೇಳುತ್ತದೆ. ಆದ್ದರಿಂದ ಕೇಂದ್ರ ಸರಕಾರ ಇದರ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳದಿದ್ದಲ್ಲಿ‌ ನಾವು ತೀವ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಐವನ್ ಡಿಸೋಜ ಹೇಳಿದರು.

Reporter_Vishwanath Panjimogaru

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.