ಮಂಗಳೂರು: ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಚುನಾವಣೆ ಘೋಷಣೆ ಬಳಿಕ ಮಾಡಿದ ಟ್ವೀಟ್ಗೆ ಮುಖ್ಯಮಂತ್ರಿ ಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ರಾತ್ರಿ 3 ಗಂಟೆಗೆ ಶತ್ರು ದೇಶಕ್ಕೆ ನುಗ್ಗಿ ಹೊಡೆಯುವಂತೆ ಆದೇಶ ನೀಡುವವರಿಗೆ ಮತ ಹಾಕಬೇಕೆ ಹೊರತು,
— Nalinkumar Kateel (@nalinkateel) March 11, 2019 " class="align-text-top noRightClick twitterSection" data="
ರಾತ್ರಿ 3 ಗಂಟೆಗೆ ಉಗ್ರರಿಗಾಗಿ ಸುಪ್ರೀಂಕೋರ್ಟ್ ಬಾಗಿಲು ತೆರೆಸುವವರಿಗಲ್ಲಾ...#ಮೋದಿ_ಮತ್ತೊಮ್ಮೆ
">ರಾತ್ರಿ 3 ಗಂಟೆಗೆ ಶತ್ರು ದೇಶಕ್ಕೆ ನುಗ್ಗಿ ಹೊಡೆಯುವಂತೆ ಆದೇಶ ನೀಡುವವರಿಗೆ ಮತ ಹಾಕಬೇಕೆ ಹೊರತು,
— Nalinkumar Kateel (@nalinkateel) March 11, 2019
ರಾತ್ರಿ 3 ಗಂಟೆಗೆ ಉಗ್ರರಿಗಾಗಿ ಸುಪ್ರೀಂಕೋರ್ಟ್ ಬಾಗಿಲು ತೆರೆಸುವವರಿಗಲ್ಲಾ...#ಮೋದಿ_ಮತ್ತೊಮ್ಮೆರಾತ್ರಿ 3 ಗಂಟೆಗೆ ಶತ್ರು ದೇಶಕ್ಕೆ ನುಗ್ಗಿ ಹೊಡೆಯುವಂತೆ ಆದೇಶ ನೀಡುವವರಿಗೆ ಮತ ಹಾಕಬೇಕೆ ಹೊರತು,
— Nalinkumar Kateel (@nalinkateel) March 11, 2019
ರಾತ್ರಿ 3 ಗಂಟೆಗೆ ಉಗ್ರರಿಗಾಗಿ ಸುಪ್ರೀಂಕೋರ್ಟ್ ಬಾಗಿಲು ತೆರೆಸುವವರಿಗಲ್ಲಾ...#ಮೋದಿ_ಮತ್ತೊಮ್ಮೆ
ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸದ ನಳಿನ್ ಅವರು ಮಾರ್ಚ್ 11 ರಾತ್ರಿ 10 ಗಂಟೆಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ 'ರಾತ್ರಿ 3 ಗಂಟೆಗೆ ಶತ್ರು ದೇಶಕ್ಕೆ ನುಗ್ಗಿ ಹೊಡೆಯುವಂತೆ ಆದೇಶ ನೀಡುವವರಿಗೆ ಮತ ಹಾಕಬೇಕೆ ಹೊರತು, ರಾತ್ರಿ 3 ಗಂಟೆಗೆ ಉಗ್ರರಿಗಾಗಿ ಸುಪ್ರೀಂ ಕೋರ್ಟ್ ಬಾಗಿಲು ತೆರೆಸುವವರಿಗಲ್ಲಾ'.ಎಂದು ಬರೆದಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಅವರು ಬಿಜೆಪಿ ಕಾರ್ಯಕರ್ತರು ಹೋಗಿ ಯುದ್ದ ಮಾಡಿದ್ದಾರೆ ಎಂದು ತಿಳಿದುಕೊಂಡಿದ್ದಾರೆ. 46 ಸೈನಿಕರ ಸಾವಿಗೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಸೈನಿಕರ ವಿಚಾರ ರಾಜಕೀಯಕ್ಕೆ ಎಳೆದು ತರಬಾರದು ಎಂದು ಚುನಾವಣಾ ಆಯೋಗ ಷರಾ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಕ್ರಮಕ್ಕೆ ಸೂಚಿಸಿದ್ದೇನೆ. ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.