ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಮತ್ತು ಅವರ ಪತ್ನಿ ಡಾ. ಕವಿತಾ ಡಿಸೋಜ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ವೈದ್ಯರ ಸಲಹೆಯಂತೆ ಮುಂದಿನ ಐದು ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಇರಲಿದ್ದೇವೆ. ಎಲ್ಲರ ಪ್ರಾರ್ಥನೆ, ಶುಭ ಹಾರೈಕೆಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ ಎಂದು ಐವನ್ ಡಿಸೋಜ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜು.31ರಂದು ಭೇಟಿ ನೀಡಿದ್ದರು. ಆ ಸಂದರ್ಭ ಐವನ್ ಡಿಸೋಜ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರು ಹಾಗು ಕಾರ್ಯಕರ್ತರು ಭಾಗವಹಿಸಿದ್ದರು. ಅಂದು ಸಂಜೆ ಐವನ್ ಡಿಸೋಜ ಅವರು ತಮ್ಮ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದರು. ಆ.1ರಂದು ಸೋಂಕು ದೃಢಗೊಂಡಿರುವ ಬಗ್ಗೆ ಸ್ವತಃ ಐವನ್ ಡಿಸೋಜ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದರು. ಸದ್ಯ ಸೋಂಕಿನಿಂದ ಗುಣಮುಖರಾಗಿರುತ್ತಾರೆ.