ETV Bharat / state

ಕಾಂಗ್ರೆಸ್ ಸೋಲಿಸಲು ಬಿಜೆಪಿ ಬಿ ಟೀಂ ನಿಂದ ಚುನಾವಣಾ ಹೊಂದಾಣಿಕೆ: ಜೈ ರಾಂ ರಮೇಶ್

ಕೋಮುವಾದಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಹೇಳಿದ್ದಾರೆ.

jai-ram-ramesh-reaction-on-bjp
ಕಾಂಗ್ರೆಸ್ ಪಕ್ಷ ಸೋಲಿಸಲು ಬಿಜೆಪಿ ಬಿ ಟೀಂ ನಿಂದ ಚುನಾವಣಾ ಹೊಂದಾಣಿಕೆ: ಜೈ ರಾಂ ರಮೇಶ್
author img

By

Published : May 1, 2023, 7:34 PM IST

ಮಂಗಳೂರು: ಕಾಂಗ್ರೆಸ್ ಪಕ್ಷ ಸೋಲಿಸುವ ನಿಟ್ಟಿನಲ್ಲಿ ಜೆಡಿಎಸ್, ಎಸ್‌ಡಿಪಿಐ, ಎಎಪಿ, ಎಂಐಎಂ ಪಕ್ಷಗಳು ಬಿಜೆಪಿ ಜೊತೆ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿವೆ. ಹಾಗಾಗಿ ಈ ಎಲ್ಲ ಪಕ್ಷಗಳು ಬಿಜೆಪಿಯ ಬಿ ಟೀಂಗಳಾಗಿವೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಆರೋಪಿಸಿದ್ದಾರೆ.

ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಯಾವುದೇ ವಿಧದ ಕೋಮುವಾದವನ್ನೂ ಯಾವತ್ತಿಗೂ ಸಹಿಸುವುದಿಲ್ಲ. ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಕೂಡ ಇದನ್ನು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಶಕ್ತಿಮೀರಿ ಶ್ರಮಿಸುತ್ತಿದೆ. ಈ ಸಂದರ್ಭ ಕಾಂಗ್ರೆಸ್ ಜೊತೆ ಕೈ ಜೋಡಿಸಬೇಕಾದ ಎಎಪಿ, ಎಸ್‌ಡಿಪಿಐ ಮತ್ತಿತರ ಪಕ್ಷಗಳು ಬಿಜೆಪಿಗೆ ಅನುಕೂಲವಾಗುವಂತೆ ಕಾರ್ಯಾಚರಿಸುತ್ತಿವೆ ಎಂದರು.

ಬಿಜೆಪಿ ಉತ್ತರ ಪ್ರದೇಶದಲ್ಲಿ ಉಚಿತ ಅಡುಗೆ ಸಿಲಿಂಡರ್ ನೀಡಿಲ್ಲ - ಜೈ ರಾಂ : ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದೆ. ಉತ್ತರ ಪ್ರದೇಶದಲ್ಲೂ ಈ ಭರವಸೆ ನೀಡಿ ಅವರು ಅಧಿಕಾರಕ್ಕೆ ಬಂದಿದ್ದಾರೆ. ಅಲ್ಲಿ ಯಾವುದೇ ಕುಟುಂಬಕ್ಕೂ ಅಡುಗೆ ಸಿಲಿಂಡರ್ ಉಚಿತವಾಗಿ ನೀಡಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಹಿಮಾಚಲ ಪ್ರದೇಶ ಹಾಗೂ ಛತ್ತೀಸ್​ಗಢದ ಚುನಾವಣೆಯಲ್ಲಿ ಪಕ್ಷವು ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಿವೆ. ರಾಜಸ್ಥಾನದಲ್ಲಿ ಎಲ್ಲ ನಾಗರಿಕರಿಗೂ ಆರೋಗ್ಯ ವಿಮೆ ಮಾಡಿಸಿದೆ. 25 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತವಾಗಿ ಸಿಗುತ್ತಿದೆ. ಹಿಮಾಚಲ ಪ್ರದೇಶ ಮತ್ತು ಛತ್ತೀಸಗಡದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಜೈರಾಂ ರಮೇಶ್ ಹೇಳಿದರು.

ಇದನ್ನೂ ಓದಿ:ಪರಿಶಿಷ್ಟ ಎಡಗೈ ಸಮುದಾಯದವರು ಈ ಸಾರಿ ಕಾಂಗ್ರೆಸ್ ಕೈಹಿಡಿಯಲಿದ್ದಾರೆ: ಸುಧಾಮ್ ದಾಸ್ ಭವಿಷ್ಯ

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಆಶೀರ್ವಾದದಿಂದ ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ: ರಾಜ್ಯದಲ್ಲಿ ಬಿಜೆಪಿ ಗೆಲ್ಲದೇ ಇದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶೀರ್ವಾದ ಸಿಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಇದು ಪ್ರಜಾಪ್ರಭುತ್ವ ದೇಶ ಎಂಬುದು ನಡ್ಡಾಗೆ ನೆನಪಿರಲಿ, ಆಶೀರ್ವಾದ ಬೇಕಿರುವುದು ಜನರದ್ದೇ ಹೊರತು, ಪ್ರಧಾನಿಯದ್ದಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಆಶೀರ್ವಾದದಿಂದ ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ. ಮುಖ್ಯಮಂತ್ರಿ, ಪ್ರಧಾನಿಯಾಗುತ್ತಾರೆ ಎಂದರು. ಪ್ರಜಾಪ್ರಭುತ್ವದಲ್ಲಿ ಜನರು ಜನಪ್ರತಿನಿಧಿಗಳಿಗೆ ಆಶೀರ್ವಾದ ನೀಡುವುದೇ ಹೊರತು ಪ್ರಧಾನಿ ಜನರಿಗೆ ಆಶೀರ್ವಾದ ನೀಡುವುದಲ್ಲ ಎಂದರು.

ಈ ವೇಳೆ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಂಸದ ಡಾ. ಅಜಯ್ ಕುಮಾರ್, ಪಕ್ಷದ ಮುಖಂಡರಾದ ಜಿ.ಎ.ಬಾವ, ಎ.ಸಿ.ವಿನಯರಾಜ್, ಅಡ್ವಕೇಟ್ ಮನೋರಾಜ್, ಪದ್ಮಪ್ರಸಾದ್ ಜೈನ್, ಜೋಕಿಂ ಡಿಸೋಜ, ಶುಭೋದಯ ಆಳ್ವ, ಲಾವಣ್ಯಾ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಕರ್ನಾಟಕ: ಜಗದೀಶ್ ಶೆಟ್ಟರ್ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.